ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ:ಭಾರೀ ಪೊಲೀಸ್ ಬಂದೋಬಸ್ತ್

ಮೈಸೂರು: ಫೆ.6 ರಿಂದ 11 ರವರೆಗೆ ನಡೆಯಲಿರುವ ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು ಭಾರೀ‌ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಜಾತ್ರಾ ಮಹೋತ್ಸವದಲ್ಲಿ ಪಾಲ್ಗಳ್ಳಲು ಈಗಾಗಲೇ ಭಕ್ತರು ಸುತ್ತೂರಿಗೆ ಆಗಮಿಸಿದ್ದಾರೆ.

ಸುತ್ತೂರು ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಯವರ ನೇತೃತ್ವದಲ್ಲಿ ಆರು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ ‌ಪೂರ್ಣಗೊಂಡಿದೆ.

ಸಾಕಷ್ಟು ಗಣ್ಯರು ಬರುವುದರಿಂದ ಬಿಗಿ ಭದ್ರತೆ ಒದಗಿಸಲಾಗಿದ್ದು,ಜಾತ್ರಾ ಮಹೋತ್ಸವ ಜರುಗುವ ಪ್ರತಿ ಕೇಂದ್ರಗಳಿಗೂ ಭದ್ರತೆ ಮಾಡಲಾಗಿದೆ.

ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ರವರು ಸುತ್ತೂರಿಗೆ ಭೇಟಿ ನೀಡಿ ಭದ್ರತೆ ಪರಿಶೀಲಿಸಿದರು.

ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಕಟ್ಟೆಚ್ಚರ ವಹಿಸುವಂತೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.