ಬಳ್ಳಾರಿ: ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಬಳ್ಳಾರಿ ನಗರದ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಮನೆ ಮೇಲೆ ದಾಳಿ ಮಾಡಿ ಇಡಿ ಶಾಕ್ ನೀಡಿದೆ.
ಭರತ್ ರೆಡ್ಡಿ ಅವರ ಮನೆ, ಕಚೇರಿ ಹಾಗೂ ಕುಟುಂಬ ಸದಸ್ಯರ ಮನೆಗಳು ಸೇರಿ ಒಟ್ಟು 13 ಕಡೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.
ಬೆಂಗಳೂರಿನಿಂದ ಬಂದ ಅಧಿಕಾರಿಗಳು ಭರತ್ ರೆಡ್ಡಿ, ಬಳ್ಳಾರಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎನ್.ಪ್ರತಾಪ್ ರೆಡ್ಡಿ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದರು.
ಶಾಸಕರ ತಂದೆ ಸೂರ್ಯ ನಾರಾಯಣ ರೆಡ್ಡಿ, ಶಾಸಕರ ಚಿಕ್ಕಪ್ಪ ಪ್ರತಾಪ್ ರೆಡ್ಡಿ, ಸಂಬಂಧಿ ಸತೀಶ್ ರೆಡ್ಡಿ ಅವರ ಮನೆ ಕಚೇರಿ ಮೇಲೂ ದಾಳಿ ನಡೆದಿದೆ.
ಭರತ್ ರೆಡ್ಡಿ ಕುಟುಂಬ ಗ್ರಾನೈಟ್ ಬಿಸಿನೆಸ್ ಹೊಂದಿದ್ದು ಬಳ್ಳಾರಿ, ಬೆಂಗಳೂರು, ಚೆನ್ನೈ ಸೇರಿದಂತೆ ಒಟ್ಟು 13 ಕಡೆ ಸಿಆರ್ಪಿಎಫ್ ಭದ್ರತೆಯಲ್ಲಿ ದಾಳಿ ನಡೆಸಲಾಗಿದೆ.