ಮೈಸೂರು: ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದ 6ನೇ ಘಟಿಕೋತ್ಸವ ಫೆ. 24ರಂದು ನಡೆಯಲಿದೆ ಎಂದು ಉಪಕುಲಪತಿ ಸಂತೋಷ್ ಕುಮಾರ್ ತಿಳಿಸಿದರು.
ಕಾಲೇಜಿನಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಫೆ. 24ರ ಮಧ್ಯಾಹ್ನ 3.30ಕ್ಕೆ ಪ್ರಾರಂಭವಾಗುವ ಘಟಿಕೋತ್ಸವದಲ್ಲಿ 1067 ಬಿಎ, 47 ಬಿಸಿಎ, 120 ಎಮ್ ಟೆಕ್, 117 ಎಂಸಿ, 51 ಎಂಎಸ್‌ಸಿ, 256 ಎಂಬಿಎ ಮತ್ತು 9 ಪಿ ಹೆಚ್ ಡಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗಯವುದು ಎಂದು ತಿಳಿಸಿದರು.
ವಿವಿಧ ವಿಭಾಗಗಳಲ್ಲಿ ಅತಿ ಹೆಚ್ಚು ಅಂಕ ಪಡೆದ 32 ವಿದ್ಯಾರ್ಥಿಗಳು ಸೇರಿದಂತೆ 63 ವಿದ್ಯಾರ್ಥಿಗಳಿಗೆ ಪದಕಗಳನ್ನು ನೀಡಲಾಗುವುದು ಎಂದು ಹೇಳಿದರು.
ಜಗದ್ಗುರು ಶ್ರೀ ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಗಳವರ ಸಾನಿಧ್ಯದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಮತ್ತು ಪದಕಗಳನ್ನು ಪ್ರದಾನ ಮಾಡಲಾಗುವುದು, ಎಐಸಿಟಿಇ ಅಧ್ಯಕ್ಷ ಡಿ.ಜೆ ಸೀತಾರಾಮ್ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ಸಂತೋಷ್ ಕುಮಾರ್ ತಿಳಿಸಿದರು.
ಜೆಎಸ್ಎಸ್ ವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ. ಬೆಟ್ ಸೂರ್ ಮಠ್, ಡಾ. ಬಿ. ಸುರೇಶ್, ಡಾ. ಸಂತೋಷ್ ಕುಮಾರ್, ಪಿ ನಂಜುಂಡಸ್ವಾಮಿ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
ಜೆಎಸ್ಎಸ್ ಎಸ್ ಟಿ ಯು ಇತ್ತೀಚೆಗೆ ಕೈಗಾರಿಕೆ ಮತ್ತು ಉದ್ಯಮ ಚಾಲಿತ ಕೋರ್ಸುಗಳನ್ನು ಆರಂಭಿಸಿದೆ, ಇತ್ತೀಚಿನ ದಿನಗಳಲ್ಲಿ ಒಂಬತ್ತು ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಉದ್ಯಮಶೀಲ ಶಿಕ್ಷಣವನ್ನು ನೀಡಲಾಗುತ್ತಿದೆ.
ಎಂ ಎಸ್ ಸಿ ಇನ್ ಕಂಪ್ಯೂಟರ್ ಸೈನ್ಸ್ , ಎಂಎಸ್ಸಿ ಇನ್ ಡೇಟಾ ಸೈನ್ಸ್, ಎಂ ಎಸ್ ಸಿ ಇನ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಸೇರಿದಂತೆ ಇನ್ನು ಕೆಲ ಕೋರ್ಸು ಗಳನ್ನು ಪ್ರಾರಂಭ ಮಾಡಲಾಗಿದೆ ಎಂದು ಉಪಕುಲಪತಿಗಳು ತಿಳಿಸಿದರು.
ಕಾಲೇಜಿನ ಆವರಣದಲ್ಲಿ ಫೆ. 22 ರಿಂದ 26ರವರೆಗೆ ಯುವ ಬಿಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ,ಇದರ ಪ್ರಯುಕ್ತ ಕ್ಯಾಂಪಸ್ ನಲ್ಲಿ ನೃತ್ಯ, ಸಂಗೀತ, ಶೈಕ್ಷಣಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದವರು ತಿಳಿಸಿದರು.
ಐದು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕರ್ನಾಟಕ, ತೆಲಂಗಾಣ, ಛತ್ತೀಸ್ಗಡ ಸೇರಿದಂತೆ ವಿವಿಧ ವಿವಿಗಳ ಸುಮಾರು 1250 ವಿದ್ಯಾರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಅವರು ತಿಳಿಸಿದರು.
ಐದು ದಿನಗಳಕಾಲ ನಡೆಯಲಿರುವ ಈ ಕಾರ್ಯಕ್ರಮದ ಉದ್ಘಾಟನೆ ಫೆ. 22ರ ಬೆಳಿಗ್ಗೆ 11 ಗಂಟೆಗೆ ನಡೆಯಲಿದ್ದು, ಖ್ಯಾತ ಗಾಯಕ ವಿಜಯ ಪ್ರಕಾಶ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ. ಬೆಟ್ ಸೂರ್ ಮಠ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ. ಸುರೇಶ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ರಿಜಿಸ್ಟ್ರಾರ್ ಧನರಾಜ್, ನಟರಾಜ, ನಂಜುಂಡಸ್ವಾಮಿ, ನಾಗೇಂದ್ರ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.