ನಮ್ಮ ಪಕ್ಷದ ಮೂವರು ಅಭ್ಯರ್ಥಿಗಳೂ ಗೆಲ್ಲುತ್ತಾರೆ: ಸಿದ್ದರಾಮಯ್ಯ ವಿಶ್ವಾಸ

ಬೆಂಗಳೂರು: ನಮ್ಮ ಪಕ್ಷದ ಮೂವರು ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಧಾನನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದು,ಕಾಂಗ್ರೆಸ್ ನ ಅಜಯ್ ಮಾಕನ್, ಚಂದ್ರಶೇಖರ್ ಹಾಗೂ ಸೈಯ್ಯದ್ ನಾಸಿರ್ ಹುಸೇನ್ ಸುಲಭವಾಗಿ ಗೆಲ್ಲುತ್ತಾರೆ ಎಂದು ತಿಳಿಸಿದರು.

ಚುನಾವಣೆಗೆ ನಿಲ್ಲುವವರೆಲ್ಲಾ ಗೆಲ್ಲುತ್ತೇವೆ ಎಂದೇ ಹೇಳುತ್ತಾರೆ ಸೋಲುತ್ತೇವೆ ಎಂದುಕೊಂಡು ಯಾರೂ ನಿಲ್ಲುವುದಿಲ್ಲ, ಆದರೆ ಅವರಿಗೆ ಎಷ್ಟು ಮತಗಳು ಬೇಕೋ ಅಷ್ಟು ಮತಗಳಿಲ್ಲ. ಅವರಿಗಿರುವುದೇ 19 ಮತಗಳು, ಅದರಿಂದ ಅವರು ಅಭ್ಯರ್ಥಿಯನ್ನು ನಿಲ್ಲಿಸಬೇಕಿರಲಿಲ್ಲ ಆದರೂ ನಿಲ್ಲುಸಿದ್ದಾರೆ ಎಂದು ಪರೋಕ್ಷವಾಗಿ ಜೆಡಿಎಸ್ ನವರಿಗೆ ಟಾಂಗ್ ನೀಡಿದರು.

ನಮ್ಮ ಎಲ್ಲಾ ಶಾಸಕರು ನಿಷ್ಠೆಯಿಂದ ಕಾಂಗ್ರೆಸ್ ಪರವಾಗಿ ಮತ ಹಾಕಿದ್ದಾಗಿದೆ, ಕಾಂಗ್ರೆಸ್ ಅಭ್ಯರ್ಥಿಯೇ ಗೆಲ್ಲುತ್ತಾರೆ ಜೆಡಿಎಸ್ ಐದನೇ ಅಭ್ಯರ್ಥಿಯನ್ನು ನಿಲ್ಲಿಸಿದ್ದರಿಂದ ನಾವೆಲ್ಲ ಒಟ್ಟಿಗೆ ಇದ್ದು  ಮತ ಹಾಕಿದ್ದೇವೆ, ನಮ್ಮ ಶಾಸಕರಿಗೆ ಆಸೆ ಆಮಿಷಗಳನ್ನು ಒಡ್ಡುವುದು ಬೆದರಿಕೆ ಹಾಕುವುದನ್ನು ಮಾಡುತ್ತಿದ್ದರು ಅದಕ್ಕೆ ಎಲ್ಲರೂ ಒಟ್ಟಿಗಿದ್ದು ಮತ ಚಲಾಯಿಸಿದ್ದೇವೆ ಎಂದು ಹೇಳಿದರು.

ಜೆಡಿಎಸ್ ಗೆ  ಆತ್ಮಸಾಕ್ಷಿ ಎನ್ನುವುದೇ ಇಲ್ಲ. ಜೆಡಿ ಎಸ್ ಎಂದು ಹೆಸರಿಟ್ಟುಕೊಂಡು ಬಿಜೆಪಿ ಜೊತೆ ಸೇರಿರುವವರಿಗೆ ಆತ್ಮ ಎಲ್ಲಿದೆ ಎಂದು   ಸಿದ್ದರಾಮಯ್ಯ ತಮ್ಮದೇ ಶೈಲಿಯಲ್ಲಿ ಪ್ರಶ್ನಿಸಿದರು.

ನಮ್ಮ ಸರ್ಕಾರದ ಬಗ್ಗೆ ಒಳ್ಳೆ ಅಭಿಪ್ರಾಯ ಇರುವ ಬೇರೆ ಪಕ್ಷದ ಮತಗಳೂ ನಮಗೆ ಬಂದಿರಬಹುದು ಎಂದು ಮಾರ್ಮಿಕವಾಗಿ ಸಿಎಂ ನುಡಿದರು.

ನಮಗೇ ಸಾಕಷ್ಟು ಮತಗಳಿರುವಾಗ ಆಸೆ ಆಮಿಷ ಒಡ್ಡುವ ಪ್ರಮೇಯ ಎಲ್ಲಿಂದ ಬರುತ್ತೆ ನಮಗೆ 136 ಮತಗಳಿವೆ.  ಸ್ವತಂತ್ರ ಅಭ್ಯರ್ಥಿ ಲತಾ ಪ್ರಕಾಶ್, ಮಲ್ಲಿಕಾರ್ಜುನ ಹಾಗೂ ದರ್ಶನ್  ಪುಟ್ಟಣ್ಣಯ್ಯ, ಪುಟ್ಟಸ್ವಾಮಿ ಗೌಡ ಹಾಗೂ ಜನಾರ್ದನ ರೆಡ್ಡಿ ಇವರ ಮತಗಳಿದ್ದ ಮೇಲೆ ಆಸೆ ಆಮಿಷ ಒಡ್ಡುವ ಪ್ರಮೇಯವಿಲ್ಲ, ಆಮಿಷ, ಬೆದರಿಕೆ ಒಡ್ಡುತ್ತಿರುವವರು ಜೆಡಿಎಸ್ ಹಾಗೂ ಬಿಜೆಪಿಯವರು ಎಂದು ತಿರುಗೇಟು ನೀಡಿದರು ಸಿದ್ದರಾಮಯ್ಯ.

ಜೆಡಿಎಸ್ ಹಾಗೂ ಬಿಜೆಪಿ ಕಾಂಗ್ರೆಸ್ ನಿಂದ ಅಡ್ಡ ಮತದಾನದ ನಿರೀಕ್ಷೆ ಯಲ್ಲಿವೆ ಎಂಬ ಪ್ರಶ್ನೆಗೆ ಉತ್ತರಿ ಅವರು ತಮ್ಮ ಶಾಸಕರನ್ನು ಭದ್ರವಾಗಿತ್ತುಕೊಳ್ಳಲಿ. ಅಡ್ಡಮತದಾನ  ಬಿಜೆಪಿ ಯಲ್ಲಿ ಮಾತ್ರ ಸಾಧ್ಯ ಎಂದರು.