ಹುಬ್ಬಳ್ಳಿ: ಡ್ರಗ್ಸ್ ಜಾಲದಲ್ಲಿ ಯಾರೇ ರಾಜಕೀಯ ನಾಯಕರು ಇದ್ದರೂ ಕ್ರಮ ಕೈಗೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಸೋಮವಾರ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಡ್ರಗ್ಸ್ ಜಾಲದಲ್ಲಿ ಯಾರೇ ಇದ್ದರೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದವರು ತಿಳಿಸಿದರು.
ಡ್ರಗ್ಸ್ ಜಾಲದಲ್ಲಿ ದೊಡ್ಡವರು ಸಣ್ಣವರು ಅನ್ನೋದು ಬೇಡ ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿದ್ದರಾಮಯ್ಯನವರು, ಜಮೀರ ಅಹ್ಮದ್ ಅವರೇ ಸಾಕ್ಷ್ಯ ಇದ್ದರೆ ಗಲ್ಲಿಗೆ ಏರಿಸಲಿ ಅಂತಾ ಅವರೇ ಹೇಳಿದ್ದಾರೆ. ಆಸಿ ್ತಎಲ್ಲಾ ಮುಟ್ಟುಗೋಲು ಹಾಕಿಕೊಳ್ಳಲಿ ಅಂತಾ ಹೇಳಿದ್ದಾರೆ. ಆದರೆ ಅವರನ್ನು ರಾಜಕೀಯವಾಗಿ ಮುಗಿಸಲು ಆರೋಪ ಮಾಡಬಾರದು ಎಂದರು.
ಸಂಬರಗಿ ಹೇಳಿದರು ಅಂತಾ ತನಿಖೆ ಮಾಡೋಕೆ ಆಗುತ್ತಾ ಎಂದು ಸಿದ್ದರಾಮಯ್ಯನವರು ಪ್ರಶ್ನಿಸಿ, ಸಾಕ್ಷ್ಯ ಇದ್ದರೆ ಯಾರನ್ನಾದ್ದರೂ ತನಿಖೆ ಮಾಡಲಿ ಎಂದು ಅವರು ಹೇಳಿದರು.
ಸಿಎಂ ಬದಲಾವಣೆ ಬಗ್ಗೆ ನಾನು ಮಾತನಾಡಲ್ಲ. ಎಂದು ಹೇಳಿ, ಅವರು ಯಾರನ್ನಾದರೂ ಸಿಎಂ ಮಾಡಿಕೊಳ್ಳಲಿ ಎಂದರು.
ಮತ್ತೊಂದು ಪ್ರಶ್ನೆಗೆ ಸಿದ್ದರಾಮಯ್ಯನವರು ಉತ್ತರಿಸಿ, ಸಿಎಂ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಏನು ಮಾತನಾಡಿಕೊಂಡಿದ್ದಾರೆ ಅಂತಾ ನನಗೆ ಗೊತ್ತಿಲ್ಲ. ಜೆಡಿಎಸ್ ನವರಿಗೆ ಸ್ಪಷ್ಟವಾದ ನಿಲುವಿಲ್ಲ. ಅವರು ಯಾವಾಗ ಬೇಕೋ ಅವಾಗ ಯಾರನ್ನಾದರೂ ತಬ್ಬಿಕೊಳ್ಳುತ್ತಾರೆ ಎಂದು ಮಾರ್ಮಿಕವಾಗಿ ಹೇಳಿದರು.