ಸಿಎಎ ಜಾರಿ: ಬಿಜೆಪಿಯ‌ ಚುನಾವಣಾ ಗಿಮಿಕ್- ಸಿದ್ದರಾಮಯ್ಯ‌ ಟೀಕೆ

ಉಡುಪಿ: ಪೌರತ್ವ ಕಾಯ್ದೆಯನ್ನು ಚುನಾವಣೆಯ ದೃಷ್ಡಿಯಿಂದ ಕೇಂದ್ರ ಸರ್ಕಾರ‌ ಜಾರಿ ಮಾಡಿದೆ ಎಂದು ಮುಖ್ಯ‌ ಮಂತ್ರಿ
ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಮಾಡಿದ್ದಾರೆ ಎಂದು ಹೇಳಿದರು.

ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಇಷ್ಟು ವರ್ಷಗಳ ಕಾಲ ಈ ಬಗ್ಗೆ ಮೌನವಹಿಸಿ , ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ.ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ಜಯಪ್ರಕಾಶ್ ಹೆಗಡೆಯವರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ ತುಂಬಿದಂತಾಗಿದೆ ಎಂದು ಪ್ರಶ್ನೆಯೊಂದಕ್ಕೆ‌ ಸಿಎಂ ಉತ್ತರಿಸಿದರು.