ಮೈಸೂರು: ಮೈಸೂರು-ಕೊಡಗು ಸರ್ವಾಂಗಿಣ ಅಭಿವೃದ್ಧಿಗೆ ಕೆಲಸ ಮಾಡಲು ತಮಗೆ ಅವಕಾಶ ನೀಡಬೇಕೆಂದು ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದ್ದಾರೆ.
ಮೈಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಹೆಸರು ಅಧಿಕೃತವಾಗಿ ಪ್ರಕಟಣೆಯಾಗುತ್ತಿದ್ದಂತೆ ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿ, ತಮಗೆ ಬಿಜೆಪಿ ಟಿಕೆಟ್ ದೊರೆತಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿ ದ್ದಾರೆ.
ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಕರ್ನಾಟಕ ಜನತೆಯ ಬೆಂಬಲ ಮತ್ತು ಭಾವನಾತ್ಮಕ ಸಂಪರ್ಕವು ನಿಸ್ಸಂದೇಹವಾಗಿ ನಮ್ಮೊಂದಿಗೆ ಎಂದು ಹೇಳಿದ್ದಾರೆ.
ಈ ಮೂಲಕ ನನಗೆ ಪ್ರಜಾ ಬಾಂಧವರನ್ನು ಭೇಟಿಯಾಗುವ ಅವಕಾಶ ಸಿಕ್ಕಿದೆ. ನನ್ನನ್ನು ನೀವೆಲ್ಲರೂ ಮುಕ್ತವಾಗಿ ಒಬ್ಬ ಸ್ನೇಹಿತನಂತೆ ಸ್ವಾಗತಿಸಿ ಆತಿಥ್ಯ ನೀಡಿದ್ದೀರಿ ಈಗ ಈ ಋಣವನ್ನು ತೀರಿಸಲು ಅವಕಾಶ ಮಾಡಿಕೊಡಬೇಕೆಂದು ಅವರು ಕೋರಿದ್ದಾರೆ.
ತಮ್ಮ ಮೇಲೆ ನಂಬಿಕೆ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಬಿ.ಎಲ್ ಸಂತೋಷ್ ಹಾಗೂ ಪಕ್ಷದ ಕಾರ್ಯಕರ್ತರಿಗೆ ಹೃತ್ಪೂರ್ವಕ ಧನ್ಯವಾದ ಎಂದು ತಿಳಿಸುತ್ತೇನೆ.
ಹಾಗೂ ಕಳೆದ ಎರಡು ಅವಧಿಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಸಂಸದ ಪ್ರತಾಪ್ ಸಿಂಹ ಅವರನ್ನು ಅಭಿನಂದಿಸುತ್ತೇನೆ ಎಂದು ಯದುವೀರ್ ಬರೆದಿದ್ದಾರೆ.