ಮೈಸೂರಿನಲ್ಲಿ ಗುಬ್ಬಚ್ಚಿ ಹಬ್ಬ ಆಚರಣೆ

ಮೈಸೂರು: ಅಳಿವಿನಂಚಿನಲ್ಲಿರುವ ಗುಬ್ಬಿ ಸಂತತಿಯನ್ನು ಮುಂದಿನ ಪೀಳಿಗೆಗೂ ಉಳಿಸಬೇಕೆಂದು ಪಕ್ಷಿ ತಜ್ಞ ಸಪ್ತ ಗಿರೀಶ್
ಎಂ ಕೆ ಕರೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ಗುಬ್ಬಚ್ಚಿ ಅಳಿವಿನಂಚಿನಲ್ಲಿದೆ,ಗುಬ್ಬಚ್ಚಿ ಉಳಿದರೆ ಉತ್ತಮ ಪರಿಸರ ನೋಡಲು ಸಾಧ್ಯ ಎಂದು ತಿಳಿಸಿದರು.

ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಗುಬ್ಬಚ್ಚಿ ಶಾಲೆ) ಆವರಣದಲ್ಲಿ ಕೆ ಎಂ ಪಿ ಕೆ ಟ್ರಸ್ಟ್ ವತಿಯಿಂದ ವಿಶ್ವ ಗುಬ್ಬಚ್ಚಿ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಗುಬ್ಬಚ್ಚಿ ಹಬ್ಬವನ್ನು ಪಕ್ಷಿಗಳಿಗೆ ನೀರಿನ ಬೌಲು ಅಳವಡಿಸಿ ನೀರನ್ನು ಹಾಕುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ನಾವು ಗುಬ್ಬಚ್ಚಿಗಳೊಂದಿಗೆ ಬೆಳೆದವರು, ಪರಿಸರ ಸಮತೋಲನ ಬಹಳ ಮುಖ್ಯ, ಗುಬ್ಬಚ್ಚಿ ಮಾತ್ರವಲ್ಲ ಎಲ್ಲ ಪಕ್ಷಿಗಳು ಕೂಡ ಅಳಿವಿನಂಚಿನಲ್ಲಿದೆ. ಆದ್ದರಿಂದ ಮುಂದಿನ ಪೀಳಿಗೆಗೂ ಗುಬ್ಬಿ ಸಂತತಿ ಉಳಿಸಬೇಕೆಂದು ಮನವಿ ಮಾಡಿದರು.

ಕೃಷಿಗೆ ಕ್ರಿಮಿನಾಶಕಗಳನ್ನು ಬಳಸಲಾಗುತ್ತಿದೆ. ಇದು ವಿಷಕಾರಿಯಾಗಿದ್ದು, ಗುಬ್ಬಿಗಳು ಸಾವನ್ನಪ್ಪುತ್ತಿದೆ,ಸುಮಾರು 25ಕ್ಕೂ ಅಧಿಕ ಗುಬ್ಬಿಗಳ ಪ್ರಬೇಧವಿದೆ,ಮನುಷ್ಯನಿಂದ ಗುಬ್ಬಿಗೆ ಕಂಟಕ ಎದುರಾಗಿದೆ ಎಂದು ವಿಷಾದಿಸಿದರು.

ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ ಮಾತನಾಡಿ,ಇತ್ತೀಚೆಗೆ
ಗುಬ್ಬಿ ಕಾಣಲು ಸಿಗುತ್ತಿಲ್ಲ, ಇಂದು ಗುಬ್ಬಚ್ಚಿ ಸೇರಿದಂತೆ ಹಲವು ಪಕ್ಷಿ ಸಂಕುಲ ಅವಸಾನದಂಚಿನಲ್ಲಿದೆ ಎಂದು ಹೇಳಿದರು.

ವಿಶೇಷವಾಗಿ ಮಕ್ಕಳಿಗೆ ಜಾಗೃತಿ ಮೂಡಿಸಲು ಹಾಗೂ ಪ್ರಕೃತಿ ಸಮತೋಲನಕ್ಕಾಗಿ ಗುಬ್ಬಚ್ಚಿಗಳನ್ನು ಉಳಿಸೋಣ,
ಬೇಸಿಗೆಯ ಬಿಸಿಲಿನ ತಾಪದಿಂದ ಪ್ರಾಣಿ ಪಕ್ಷಿಗಳನ್ನು ರಕ್ಷಿಸೋಣ ಎಂದು ಕೋರಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಅರ್ಥ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ಆರ್ ಎಚ್ ಪವಿತ್ರ,
ಪರಿಸರ ಪ್ರೇಮಿ ಶ್ರೀನಿವಾಸ್ ಭಾಷ್ಯಂ,
ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಮೋಹನ್ ಕುಮಾರ್, ಅಜಯ್ ಶಾಸ್ತ್ರಿ, ಬೈರತಿ ಲಿಂಗರಾಜು, ಅರಿವು ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ್ ಕಶ್ಯಪ್ , ದಿವ್ಯ ಮತ್ತಿತರರು ಭಾಗವಹಿಸಿದ್ದರು