ಬೆಂಗಳೂರು: ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ಆರೋಪಿ ನಟಿ ರಾಗಿಣಿ ದ್ವಿವೇದಿ ಸೇರಿದಂತೆ ಐವರನ್ನು ನ್ಯಾಯಾಲಯಾ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಸಿಸಿಬಿ ಪೆÇಲೀಸರು ಸೋಮವಾರ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ರಾಗಿಣಿ ಸೇರಿದಂತೆ ಐವರನ್ನು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ನಟಿ ರಾಗಿಣಿ ಸೆ. 27ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಸಂಜನಾ ಮತ್ತು ರಾಗಿಣಿ ಸೇರಿದಂತೆ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಗೆ ಸಿಸಿಬಿ ಪೆÇಲೀಸರು ಆಕ್ಷೇಪಣೆಯೂ ಸಲ್ಲಿಸಿದ್ದರು.
ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಸೆ. 16ಕ್ಕೆ ಮುಂದೂಡಿದೆ.