ಮೈಸೂರು: ಮೈಸೂರು ಅರಮನೆ ಆವರಣದಲ್ಲಿ ಹಮ್ಮಿಕೊಂಡಿದ್ದ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ತಾತ್ಕಾಲಿಕವಾಗಿ ರದ್ದಾಗಿದೆ.
ಯುಗಾದಿ ಹಬ್ಬದ ಪ್ರಯುಕ್ತ ಅರಮನೆ ಮಂಡಳಿ ವತಿಯಿಂದ ಯುಗಾದಿ ಸಂಗೀತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಯುಗಾದಿ ಸಂಗೀತೋತ್ಸವಕ್ಕೆ ಸಂಬoಧಿಸಿದoತೆ, ಪೂರ್ವಭಾವಿ ಕಾರ್ಯಗಳು ಪ್ರಗತಿಯಲ್ಲಿರುವುದರಿಂದ ಏ.8 ರಿಂದ ಏ.12 ರವರೆಗೆ ಅರಮನೆ ಆವರಣದಲ್ಲಿ ಸಂಜೆ 7 ರಿಂದ 8 ಗಂಟೆಯವರೆಗೆ ನಡೆಯಬೇಕಿದ್ದ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿಯ ಉಪ ನಿರ್ದೇಶಕರು ತಿಳಿಸಿದ್ದಾರೆ.