ಗೃಹ ಸಚಿವ ಬೊಮ್ಮಾಯಿಗೂ ಕೊರೊನಾ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಗೃಹ ಸಚಿವ ಬಸವರಾಜ ಬೊಮ್ಮಾಯಿಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಈ ಸಂಬಂಧ ಮಾಹಿತಿ ನೀಡಿರುವ ಬಸವರಾಜ್ ಬೊಮ್ಮಾಯಿ, ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಹುಡುಗನಿಗೆ ಮಂಗಳವಾರ ಕೋವಿಡ್-19 ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಕೊರೊನಾ ಸೋಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿ ಪ್ರತ್ಯೇಕವಾಗಿರುತ್ತೇನೆ.
ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಕೋರುತ್ತೇನೆ ಎಂದು ಗೃಹ ಸಚಿವ ಮನವಿ ಮಾಡಿದ್ದಾರೆ.