ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಟಿ.ಬಿ ಜಯಚಂದ್ರ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ ಶಿವಕುಮಾರ್ ಅವರು ಪಕ್ಷದ ನಾಯಕರೊಂದಿಗೆ ಬುಧವಾರ ಉಪಚುನಾವಣೆ ಹಿನ್ನೆಲೆಯಲ್ಲಿ ಸಭೆ ನಡೆಸಿದರು.
ಸಭೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ಡಿಕೆಶಿ ಈ ಬಗ್ಗೆ ಮಾಹಿತಿ ನೀಡಿದರು.
ಶಿರಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಮಾಜಿ ಸಚಿವ ಟಿ.ಬಿ ಜಯಚಂದ್ರ ಅವರನ್ನು ಕಣಕ್ಕಿಳಿಸುವ ಬಗ್ಗೆ ತೀರ್ಮಾನಿದ್ದೇವೆ. ರಾಜಣ್ಣ ಅವರೇ ಜಯಚಂದ್ರ ಅವರ ಹೆಸರನ್ನು ಸೂಚಿಸಿದ್ದಾರೆಂದ ಅವರು ಜಯಚಂದ್ರರ ಹೆಸರನ್ನು ಪಕ್ಷದ ಹೈಕಮಾಂಡ್ ಗೆ ಕಳುಹಿಸಿಕೊಡುತ್ತೇವೆ ಎಂದರು.
ಶಿರಾ ಉಪಚುನಾವಣೆಯನ್ನು ಡಾ. ಜಿ. ಪರಮೇಶ್ವರ ಅವರ ನೇತೃತ್ವದಲ್ಲಿ ಎದುರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಡಿಕೆಶಿ ತಿಳಿಸಿದರು.
ಎಲ್ಲ ನಾಯಕರು ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದರು.