ಕಲಬುರಗಿ: ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಲಿದ್ದೇನೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಸಿಎಂ ಮಾಧ್ಯಮ ಪ್ರತಿನಿಧಗಳೊಂದಿಗೆ ಗುರುವಾರ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಸಮಯ ಅವಕಾಶ ನಿಗದಿಯಾಗಿದೆ. ಸಚಿವ ಸಂಪುಟ ವಿಸ್ತರಣೆ ಮತ್ತು ನೆರೆ ಪರಿಹಾರ ಬಿಡುಗಡೆ ಕುರಿತು ಚರ್ಚಿಸುವುದಾಗಿ ಯಡಿಯೂರಪ್ಪ ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೇ ಎಂಬ ಪ್ರಶ್ನೆಗೆ ಯಡಿಯೂರಪ್ಪನವರು ಉತ್ತರಿಸಿ, ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬೇಕಾದ ವ್ಯವಸ್ಥೆ ಮಾಡಲು ನಮ್ಮ ಸರ್ಕಾರ ಬದ್ಧ ಎಂದು ಸಿಎಂ ತಿಳಿಸಿದರು.