ಬೆಳಗಾವಿ: ಮುಖ್ಯಮಂತ್ರಿ ರಾಜ್ಯದ ಸಮಗ್ರ ಅಭಿವೃದ್ಧಿ ಬಗ್ಗೆ ಚಿಂತಿಸುತ್ತಿಲ್ಲ ಎಂದು ಶಾಸಕ ಉಮೇಶ ಕತ್ತಿ ಹೇಳಿದರು.
ನಗರದಲ್ಲಿ ಶುಕ್ರವಾರ ಶಾಸಕ ಉಮೇಶ ಕತ್ತಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿ ರಾಜ್ಯದ ಸಮಗ್ರ ಅಭಿವೃದ್ಧಿ ಬಗ್ಗೆ ಚಿಂತಿಸುತ್ತಿಲ್ಲದಿರುವುದರಿಂದ ತೀವ್ರ ನೋವಾಗಿದೆ ಎಂದರು.
ಬಿ.ಎಸ್. ಯಡಿಯೂರಪ್ಪ ಇಂದು ಪೂರ್ಣ ರಾಜ್ಯದ ಬಗ್ಗೆ ಚಿಂತಿಸದೇ ಕೇವಲ ಶಿವಮೊಗ್ಗ ಜಿಲ್ಲೆಗೆ ಸೀಮಿತವಾಗಿದ್ದಾರೆ ಎಂದು ಅವರು ಹೇಳಿದರು.
ಶಿವಮೊಗ್ಗಕ್ಕೆ ಭರಪೂರ ಅನುದಾನ ಒದಗಿಸಿದ್ದಾರೆ. ಆದರೆ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಯೋಜನೆಗಳ ಬಗ್ಗೆ ಅವರು ಗಮನಕೊಡುತ್ತಿಲ್ಲ ಎಂದು ಉಮೇಶ ಕತ್ತಿ ಅಸಮಧಾನ ವ್ಯಕ್ತಪಡಿಸಿದರು.
ಇಲ್ಲಿನ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆಯೂ ನಿರ್ಲಕ್ಷ್ಯ ವಹಿಸಿದ್ದಾರೆ ಅವರು ಎಂದು ತಿಳಿಸಿದರು.
ಉತ್ತರ ಕರ್ನಾಟಕ ಅಭಿವೃದ್ಧಿ ಸಹ ಮುಖ್ಯ ಎಂದರು.