ಪ್ರಜ್ವಲ್ ನಿವಾಸದಲ್ಲಿ ಸಾಕ್ಷ್ಯ ಸಂಗ್ರಹಿಸಿದ ಎಸ್ಐಟಿ

ಹಾಸನ: ನೂರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಹೊತ್ತಿರುವ ಸಂಸದ ಪ್ರಜ್ವಲ್ ಬೆಂಗಳೂರಿಗೆ ಮರಳುವ ದಿನ ಸಮೀಪಿಸುತ್ತಿದ್ದಂತೆಯೇ ಎಸ್ ಐಟಿ ಹಾಸನದಲ್ಲಿ ಸಾಕ್ಷ್ಯ ಸಂಗ್ರಹವನ್ನು ತೀವ್ರಗೊಳಿಸಿದೆ.

ಸಂಸದರ ನಿವಾಸದಲ್ಲಿ ನಿನ್ನೆ ಎಸ್ಐಟಿ ಹಾಗೂ ಎಫ್ ಎಸ್ ಎಲ್ ತಂಡ ಪರಿಶೀಲನೆ ನಡೆಸಿ, ಸಾಕ್ಷ್ಯ ಸಂಗ್ರಹ ಕಾರ್ಯವನ್ನು ಬುಧವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮುಕ್ತಾಯಗೊಳಿಸಿವೆ.

ಪ್ರಜ್ವಲ್ ರೇವಣ್ಣ ವಿಚಾರಣೆ ವೇಳೆ ಮಹತ್ವದ ದಾಖಲೆ ಸಂಗ್ರಹಿಸಲು ಮುಂದಾಗಿರುವ ಎಸ್ ಐಟಿ, ಹಾಸನದ ಆರ್ ಸಿ ರಸ್ತೆಯಲ್ಲಿರುವ ಸಂಸದರ ನಿವಾಸದಲ್ಲಿ ಅವರ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು, ಹೊದಿಕೆ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆದು ಬೆಂಗಳೂರಿಗೆ ತೆರಳಿತು.