ಬೆಂಗಳೂರು: ಬಿಜೆಪಿ ವಿರುದ್ಧ 40% ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ ಪ್ರಕರಣದಲ್ಲಿ ಸಿಎಂ ಡಿಸಿಎಂ ಗೆ ಜಾಮೀನು ಮಂಜೂರಾಗಿದೆ.
ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿತ್ತು. ಹೀಗಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ಹೂಡಿತ್ತು.
ಬಿಜೆಪಿ ಕೇಸಿನ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು,
ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಚುನಾವಣೆ ಸಮಯದಲ್ಲಿ ಬಿಜೆಪಿ ಸರ್ಕಾರದ ಮೇಲೆ ಭ್ರಷ್ಟಾಚಾರ ಆರೋಪವನ್ನು ಆಗ ಕಾಂಗ್ರೆಸ್ ಮಾಡಿತ್ತು. ಕಾಂಗ್ರೆಸ್ ವಿರುದ್ಧ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೇಶವ್ ಪ್ರಸಾದ್ ದೂರು ದಾಖಲಿಸಿದ್ದರು.
ಪ್ರಕರಣ ಸಂಬಂಧ ಸಿಎಂ, ಡಿಸಿಎಂಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ ಆಗಿತ್ತು.
ಕೋರ್ಟ್‌ಗೆ ಬಂದ ಸಿಎಂ, ಡಿಸಿಎಂ ಅವರನ್ನು ಸರ್ಕಾರಿ ಅಭಿಯೋಜಕರ ಕೊಠಡಿಯಲ್ಲಿ ಕುಳಿತುಕೊಳ್ಳಲು ಸೂಚಿಸಲಾಯಿತು. ಆದರೆ, ಬೇಡ ಇಲ್ಲೆ ಕುಳಿತುಕೊಳ್ಳುತ್ತೇವೆ ಎಂದು ಇಬ್ಬರೂ ಹೇಳಿದರು.
ಸಾಮಾನ್ಯರಂತೆಯೇ ನ್ಯಾಯಾಲಯದ ಹೊರಗಡೆ ಸಿಎಂ ಮತ್ತು ಡಿಸಿಎಂ ಕುಳಿತರು. ನಾಯಕರ ಪರವಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಹಮ್ಮದ್ ಹಾಜರಿದ್ದರೆ ಬಿಜೆಪಿ ಪರ ವಕೀಲ ವಿನೋದ್ ಕುಮಾರ್ ಹಾಜರಾಗಿದ್ದರು.