ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ

ಬೆಂಗಳೂರು: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದರು.

ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ವಾಲ್ಮೀಕಿ ನಿಗಮದ ಪ್ರಕರಣ ಸಂಬಂಧ SIT ರಚಿಸಲಾಗಿದ್ದು ತನಿಖೆ ಚುರುಕಾಗಿ ನಡೆಯುತ್ತಿದೆ,ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಬಿಜೆಪಿ ಯವರು ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ಪ್ರತಿಕ್ರಿಯಿಸಿದ‌ ಸಿಎಂ, ಸಿವಿಲ್ ಸ್ವರೂಪದ ಪ್ರಕರಣ ಇದಾಗಿದೆ, ಕಾನೂನು ರಕ್ಷಕರಾಗಿ, ಪಾಲಕರಾಗಿ ನ್ಯಾಯಾಲಯದ ಸೂಚನೆ ಮೇರೆಗೆ ನಾನು ನ್ಯಾಯಾಧೀಶರ ಮುಂದೆ ಹಾಜರಾಗಿದ್ದೇವೆ ಜಾಮೀನು ಪಡೆದಿದ್ದೇವೆ ಎಂದು ತಿಳಿಸಿದರು

ನಾನು ಸೇರಿದಂತೆ ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧವೂ ಖಾಸಗಿ ದೂರು ದಾಖಲಾಗಿದ್ದು ರಾಹುಲ್ ಗಾಂಧಿಯವರೂ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.