ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಭರ್ಜರಿ ಜಯ ಗಳಿಸಿದ್ದಾರೆ.
ಕುಮಾರಸ್ವಾಮಿ ಅವರು ಗೆಲುವು ಸಾಧಿಸುವ ಮೂಲಕ ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದು ಇದೇ ಪ್ರಥಮ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ.
ಹೆಚ್ ಡಿ ಕೆ ತಮ್ಮ ಸಮೀಪದ ಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು(ವೆಂಕಟರಮಣ ಗೌಡ) ಅವರಿಗೆ ಸೋಲುಣಿಸಿದ್ದಾರೆ.
ಕುಮಾರಸ್ವಾಮಿ ಅವರು 1.90 ಲಕ್ಷ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.