ಜೂ. 9ರಂದು ಮೋದಿ ಪ್ರಧಾನಿಯಾಗಿ ಪ್ರಮಾಣವಚನ:ಜೋಶಿ

ನವದೆಹಲಿ: ನರೇಂದ್ರ ಮೋದಿ ಅವರು ಜೂ. 9 ಭಾನುವಾರ ಸಂಜೆ 6 ಗಂಟೆಗೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪ್ರಹ್ಲಾದ‌ ಜೋಶಿ ತಿಳಿಸಿದ್ದಾರೆ.

ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ಶುಕ್ರವಾರ ನಡೆದ ಎನ್‌ಡಿಎ ಸಂಸದರ ಸಭೆ  ವೇಳೆ ಪ್ರಹ್ಲಾದ್‌ ಜೋಶಿ ಮಾಧ್ಯಮದವರೊಂದಿಗೆ ಮಾತನಾಡಿ,ಮೋದಿ ಅವರು

ಜೂ.‌ 9ರಂದು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.

ಆರಂಭದಲ್ಲಿ ಶನಿವಾರ ಪ್ರಮಾಣ ವಚನ ನಡೆಯಲಿದೆ ಎಂದು ವರದಿಯಾಗಿತ್ತು,ಆದರೆ ಭಾನುವಾರ ಪ್ರಮಾಣ ವಚನ ನಡೆಯುವುದು ಖಚಿತ ಎಂದು ಅಧಿಕೃತವಾಗಿ ತಿಳಿಸಲಾಗಿದೆ.