ವಿಮಾನ ನಿಲ್ದಾಣ ಪ್ರಾಧಿಕಾರ ಅಧಿಕಾರಿಗಳನ್ನ ಭೇಟಿ ಮಾಡಿ ಚರ್ಚಿಸಿದ ಯದುವೀರ್

ಮೈಸೂರು: ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಓಡೆಯರ್ ಅವರು  ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಅಧಿಕಾರಿಗಳನ್ನು ಭೇಟಿ ಮಾಡಿದರು.

ಈ ವೇಳೆ ಅವರು ವಿಮಾನಯಾನ ಹಾಗೂ ವಿಮಾನ ಹಾರಾಟದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. 

ಮೈಸೂರಿನ ವಿಮಾನ ನಿಲ್ದಾಣ ಹಾಗೂ ವಿಮಾನಯಾನವನ್ನು ಮೇಲ್ದರ್ಜೆಗೆ ಏರಿಸುವ ಕುರಿತು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಂಭಂಧಪಟ್ಟವರೊಂದಿಗೆ ಚರ್ಚಿಸಿ ಶೀಘ್ರ ಕಾರ್ಯರೂಪಕ್ಕೆ ತರುಲು ಪ್ರಯತ್ನಿಸುತ್ತೇನೆ ಎಂದು ಯದುವೀರ್ ಭರವಸೆ ನೀಡಿದ್ದಾರೆ.