14 ದಿನ ಪ್ರಜ್ವಲ್ ಗೆ ನ್ಯಾಯಾಂಗ ಬಂಧನ

ಬೆಂಗಳೂರು: ಪೆನ್‌ಡ್ರೈವ್ ಪ್ರಕರಣ, ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ

ಎರಡನೇ ಭಾರಿಗೆ ವಶಕ್ಕೆ ಪಡೆದಿದ್ದ ಎಸ್‌ಐಟಿ ಅಧಿಕಾರಿಗಳ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಬಸವನಗುಡಿಯಲ್ಲಿ ಸ್ಥಳ ಮಹಜರು ಮಾಡಿದ ನಂತರ ತನಿಖಾಧಿಕಾರಿಗಳು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಪ್ರಜ್ವಲ್ ಮೇಲೆ ಇನ್ನೂ ಎರಡು ಅತ್ಯಾಚಾರ ಪ್ರಕರಣಗಳ ತನಿಖೆ ಬಾಕಿ.

ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಮುಂದಿನ 14 ದಿನಗಳ ವರೆಗೆ (ಜೂನ್ 24) ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಅಪಹರಣ ಪ್ರಕರಣ ಸಂಬಂಧ ಹನ್ನೊಂದು ದಿನ ಪೊಲೀಸ್ ವಶದಲ್ಲಿದ್ದು ಜಾಮೀನಿನ ಮೇಲೆ ಬಿಡುಗಡೆ ಆಗಿರುವ ತಂದೆ ಹೆಚ್‌.ಡಿ ರೇವಣ್ಣ ಅವರಿದ್ದ ಸೆಲ್‌ಗೆ ಪ್ರಜ್ವಲ್ ರೇವಣ್ಣ ಸಹ ಸೇರಿದ್ದಾರೆ.

ಹೊಳೆನರಸೀಪುರ ಠಾಣೆಯಲ್ಲಿ ದಾಖಲಾದ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ತನಿಖೆ ನಡೆಸುತ್ತಿದೆ.