ಕೊಲೆ ಕೇಸ್‌‌ ನಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಬಂಧನ

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ರೇಣುಕಾಸ್ವಾಮಿ

ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣ ಸಂಬಂಧ ದರ್ಶನ್‌ ಅವರನ್ನು  ಬಂಧಿಸಲಾಗಿದೆ.

ಕೊಲೆ ಮಾಡಿದ ಆರೋಪಿಗಳ ಜೊತೆ ನಿರಂತರ ಸಂಪರ್ಕ ಹೊಂದಿದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮೈಸೂರಿನ ತೋಟದ ಮನೆಯಲ್ಲಿ ದರ್ಶನ್‌ ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆದೊಯ್ದರು.

ಇದೀಗ ಪೊಲೀಸರು ದರ್ಶನ್‌ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಲಯಕ್ಕೆ  ಹಾಜರು ಪಡಿಸಲಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಅವರು ಪವಿತ್ರಾ ಗೌಡ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪೋಸ್ಟ್‌ ಮಾಡಿದ್ದರು.

ಈ ಪೋಸ್ಟ್‌ ಮಾಡಿದ ನಂತರ ರೇಣುಕಾಸ್ವಾಮಿ ಅವರನ್ನು ಜೂನ್‌ 8 ಭಾನುವಾರ ಹತ್ಯೆ ಮಾಡಲಾಗಿತ್ತು.

ಕೊಲೆ ಮಾಡಿದ ಇಬ್ಬರು ಅರೋಪಿಗಳ ಜೊತೆ ದರ್ಶನ್‌ ನಿರಂತರ  ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿ ಬಂದಿದೆ.

ವಿಚಾರಣೆ ವೇಳೆ ಕೊಲೆ ಆರೋಪಿಗಳು ದರ್ಶನ್‌ ಸೂಚನೆಯಂತೆ ಕೊಲೆ ಮಾಡಿದ್ದೇವೆ, ಕೊಲೆಗೆ ಸುಪಾರಿ ನೀಡಿದ್ದರು ಎಂದು ಆರೋಪಿಗಳು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ದರ್ಶನ್‌ ಅವರನ್ನು ಬಂಧಿಸಲಾಗಿದೆ.