ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಬಂಧನದ ಬೆನ್ನಲ್ಲೇ ನಟಿ ಪವಿತ್ರ ಗೌಡ ಕೂಡಾ ಬಂಧನವಾಗಿದೆ.
ನಟಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್, ಫೋಟೊ ಕಳಿಸಿದ್ದರ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಎಂಬಾತನನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೂಚನೆ ಮೇರೆಗೆ ಬೆಂಗಳೂರಿಗೆ ಕರೆಸಿಕೊಂಡು ಕೊಲೆ ಮಡಲಾಗಿತ್ತು.
ಹತ್ಯೆ ಬಳಿಕ ಶವವನ್ನು ಕಾಮಾಕ್ಷಿಪಾಳ್ಯದ ಮೋರಿಗೆ ಎಸೆಯಲಾಗಿದ್ದು,ಮೃತದೇಹವನ್ನು ನಾಯಿಗಳು ಎಳೆಯುತ್ತಿದ್ದಾಗ ಜೂನ್ 9ರಂದು ಬೆಳಿಗ್ಗೆ ಸಾರ್ವಜನಿಕರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 10 ಜನರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಟಿ ಪವಿತ್ರಾ ಗೌಡಳನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.