ದರ್ಶನ್‌, ಪವಿತ್ರಾ ಟೀಂ ಮತ್ತೆ ಪೊಲೀಸ್‌ ಕಸ್ಟಡಿಗೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 13 ಮಂದಿಯನ್ನು ಕೋರ್ಟ್ ಮತ್ತೆ ಪೊಲೀಸ್‌ ಕಸ್ಟಡಿಗೆ ನೀಡಿದೆ.

ಪ್ರಕರಣ ಸಂಬಂಧ ಶನಿವಾರ ಸಂಜೆವರೆಗೆ  42ನೇ ಎಸಿಎಂಎಂ ನ್ಯಾಯಾಲಯ ವಿಚಾರಣೆ ನಡೆಸಿತು. ಕೊಲೆ ಆರೋಪ ಎದುರಿಸುತ್ತಿರುವವರ ಪೈಕಿ ದರ್ಶನ್,ಪವಿತ್ರಾ ಸೇರಿ 13 ಆರೋಪಿಗಳನ್ನು 5 ದಿನಗಳ ಕಾಲ ಮತ್ತೆ ಪೊಲೀಸ್‌ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿತು.

ಹದಿಮೂರು ಆರೋಪಗಳನ್ನು ಪೊಲೀಸ್ ಕಸ್ಟಡಿಗೆ ನ್ಯಾಯಾದೀಶರು ಒಪ್ಪಿಸಿದ್ದಾರೆ.

ನ್ಯಾಯಾಲಯದ ಆದೇಶದ ನಂತರ ಆರೋಪಿಗಳನ್ನು ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ಕರೆತರಲಾಗಿದ್ದು,ಠಾಣೆಯ ಸುತ್ತ,ಮುತ್ತ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ‌