ಮೈಸೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಲ್ಲಿ ಇಬ್ಬರನ್ನು ಮೈಸೂರಿಗೆ ಕರೆತಂದು ಸ್ಥಳ ಮಹಜರು ನಡೆಸಲಾಯಿತು.
ದರ್ಶನ್ ರ ಪರ್ಸನಲ್ ಮ್ಯಾನೇಜರ್ ನಾಗರಾಜು ಹಾಗೂ ಕಾರಿನ ಚಾಲಕ ಲಕ್ಷ್ಮಣ್ ರನ್ನು ಬೆಂಗಳೂರು ಪೊಲೀಸರು ಮೈಸೂರಿನ ರ್‍ಯಾಡಿಸನ್ ಬ್ಲೂ ಹೋಟೆಲ್ ಗೆ ಮಂಗಳವಾರ ಮಧಾಹ್ನ ಕರೆತಂದು ಸ್ಥಳ ಮಹಜರು ಮಾಡಿದರು.
ನಟ ದರ್ಶನ್ ನನ್ನು ರ್‍ಯಾಡಿಸನ್ ಬ್ಲೂ ಹೋಟೆಲ್ ನಲ್ಲಿ ಬಂದಿಸಲಾಗಿತ್ತು.ಈ ಹಿನ್ನೆಲೆಯಲ್ಲಿ ಸ್ಥಳ ಮಹಜರಿಗಾಗಿ ಆರೋಪಿಗಳಿಬ್ಬರನ್ನು ಪೊಲೀಸರು ಕರೆತಂದು ಮಹಜರು ನಡೆಸಿದರು.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ನಂತರ ದರ್ಶನ್ ಮೈಸೂರಿಗೆ ಆಗಮಿಸಿ ರ್‍ಯಾಡಿಸನ್ ಬ್ಲೂ ಹೋಟೆಲ್ ನಲ್ಲಿ ಉಳಿದುಕೊಂಡು ಲಲಿತ ಮಹಲ್ ನಲ್ಲಿ ನಡೆಯುತ್ತಿರುವ ಡೆವಿಲ್ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು.
ದರ್ಶನ್ ಈ ಹೋಟೆಲ್ ನಿಂದ ಮೈಸೂರಿನ ಕುವೆಂಪು ನಗರದಲ್ಲಿರುವ ಗೋಲ್ಡ್ ಜಿಮ್ ಗೆ ತೆರಳಿ ಅಲ್ಲಿ ವರ್ಕೌಟ್ ಮಾಡಿ ನಂತರ ರ್‍ಯಾಡಿಸನ್ ಬ್ಲೂ ಹೋಟೆಲ್ ಗೆ ಆಗಮಿಸಿದಾಗ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು.
ಈ ಹಿನ್ನಲೆಯಲ್ಲಿ ಇಂದು ಪೊಲೀಸರು ಇಬ್ಬರು ಆರೋಪಿಗಳನ್ನು ಕರೆತಂದು,
ರಾಡಿಸನ್ ಬ್ಲೂ ಹೋಟೆಲ್ ಸ್ಥಳಮಹಜರು ನಂತರ ದರ್ಶನ್ ಚಿತ್ರೀಕರಣದಲ್ಲಿ ಭಾಗವಹಿಸಿದ್ದ ಹೋಟೆಲ್ ಲಲಿತ ಮಹಲ್ ಆ ನಂತರ ಮೈಸೂರು ಟಿ ನರಸೀಪುರ ರಸ್ತೆಯಲ್ಲಿರುವ ದರ್ಶನ ಫಾರಂ ಹೌಸಿಗೂ ಕರೆತಂದು ಸ್ಥಳಮಹಜರು ನಡೆಸಿದರು.