ಆರೋಗ್ಯವಾಗಿರಲು ನಿತ್ಯ ಯೋಗ ಅಳವಡಿಸಿಕೊಳ್ಳಿ:ಹೆಚ್ ಡಿ.ಕೆ

ನವದೆಹಲಿ: 2014 ರಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗವನ್ನು ಆಚರಿಸಲಾಗುತ್ತಿದೆ, ಮೈಸೂರಿನ ಅರಮನೆ ಮೈದಾನದಲ್ಲಿ ಮೋದಿ ಅವರು ಮೊದಲ ಬಾರಿಗೆ ಯೋಗ ಮಾಡಿದರು ಎಂದು ಕೇಂದ್ರ ಸಚಿವ‌ ಹೆಚ್.ಡಿ.ಕುಮಾರಸ್ವಾಮಿ ಸ್ಮರಿಸಿದರು

ನೋಯ್ಡಾದ ಬಿಹೆಚ್‌ಇಎಲ್‌ ಟೌನ್‌ಶಿಪ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಯೋಗ ಪ್ರದರ್ಶನ ಮಾಡಿ  ಮಾತನಾಡಿದರು.

ಕಾಶ್ಮೀರದಲ್ಲಿ ಮೋದಿ ಅವರು ಯೋಗ ಮಾಡುತ್ತಿದ್ದಾರೆ. ಇದು ಒಳ್ಳೆಯ ಸಂದೇಶ, ಪ್ರೇರಣೆಯಾಗಿದೆ ಎಂದು ತಿಳಿಸಿದರು.

ಕಾಯಿಲೆಗಳಿಗೆ ಯೋಗ ಸ್ವಲ್ಪ ಮುಕ್ತಿ ನೀಡುತ್ತದೆ, ಯೋಗಕ್ಕೆ ನಮ್ಮ‌ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನವಿದೆ.

ಆರೋಗ್ಯವಂತವಾಗಿರಲು ನಿತ್ಯ ಯೋಗ ಅಳವಡಿಸಿಕೊಳ್ಳಬೇಕು ಎಂದು ಹೆಚ್.ಡಿ.ಕುಮಾರಸ್ವಾಮಿ ಕರೆ ನೀಡಿದರು.

ಕೇಂದ್ರ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ಹೆಚ್‌ಡಿಕೆ ಭಾಗಿಯಾಗಿದ್ದು, ಬಿಹೆಚ್ಇಎಲ್‌ ಸಿಬ್ಬಂದಿ ಮತ್ತು ಸ್ಥಳೀಯರು ಸಾಥ್‌ ನೀಡಿದರು.