ದರ್ಶನ್ ಸೇರಿ ನಾಲ್ವರು ಜುಲೈ 4 ರವರೆಗೆ ಜೈಲುಪಾಲು

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಲ್ವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿದೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ನಾಲ್ಕು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಅಂತ್ಯಗೊಂಡಿತ್ತು.ಹಾಗಾಗಿ ನಾಲ್ಕೂ ಆರೋಪಿಗಳನ್ನು ಮತ್ತೆ 24 ನೇ ಎಸಿಎಂಎಂ ಕೋರ್ಟ್‍ಗೆ ಹಾಜರು ಪಡಿಸಲಾಯಿತು.

ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ದರ್ಶನ್, ವಿನಯ್, ಧನರಾಜ್ ಹಾಗೂ ಪ್ರದೋಶ್ ನನ್ನು ಜುಲೈ 4 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

ಈಗಾಗಲೇ ಆರೋಪಿಗಳನ್ನು ಮೂರು ಬಾರಿ ಕಸ್ಟಡಿಗೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾಗುದೆ, ನಟ ದರ್ಶನ್ ಮನೆಯಲ್ಲಿ ಸಿಕ್ಕ ಹಣದ ಬಗ್ಗೆ ವಿಚಾರಿಸಲು ಎರಡು ದಿನದ ಹಿಂದೆ ಪೊಲೀಸರು, ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಮತ್ತೆ ಕಸ್ಟಡಿಗೆ ಪಡೆದುಕೊಂಡು ತಮಗೆ ಅಗತ್ಯವಾದ ಮಾಹಿತಿಗಳನ್ನು ‌ಪಡೆದಿದ್ದಾರೆ.

ರೇಣುಕಾಸ್ವಾಮಿ ಕಿಡ್ನಾಪ್‌ ಹಾಗೂ ಕೊಲೆ ಪ್ರಕರಣದಲ್ಲಿ ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಲ್ಲಿ 13 ಆರೋಪಿಗಳು ಈಗಾಗಲೇ ಪರಪ್ಪನ ಅಗ್ರಹಾರ‌ ಜೈಲಿನಲ್ಲಿದ್ದಾರೆ.ಇದೀಗ ದರ್ಶನ್,ವಿನಯ್, ಧನರಾಜ್ ಹಾಗೂ ಪ್ರದೋಶ್ ಕೂಡಾ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ.