ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಾಸನ ಸೆನ್ ಠಾಣೆ ಪೊಲೀಸರು ಸಂಜೆ ಸುಮಾರು 7.30 ರ ವೇಳೆ ಸೂರಜ್ ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಹೊಳೆನರಸೀಪುರ ತಾಲೂಕು ಕೊಳ್ಳಂಗಿ ಗ್ರಾಮದ ಯುವಕ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ತಮಗೆ ಹಿಂಸೆ ಕೊಟ್ಟಿದ್ದಾರೆ ಜತೆಗೆ ಬೆದರಿಕೆ ಒಡ್ಡಿದ್ದಾರೆ ಎಂದು ದೂರು ನೀಡಿದ್ದು ಹೊಳೆನರಸೀಪುರ ಠಾಣೆಯಲ್ಲಿ ಸೂರಜ್ ರೇವಣ್ಣ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಈ ಹಿನ್ನೆಲೆಯಲ್ಲಿ ಸಂಜೆ ರೇವಣ್ಣ ಅವರನ್ನು ಹಾಸನ ಸೆನ್ ಠಾಣೆ ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ.
ಠಾಣೆ ಸುತ್ತಮುತ್ತ ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ಸೂರಜ್ ರೇವಣ್ಣ ಅವರು ತಮ್ಮ ಕಾರಿನಲ್ಲೇ ಸೆನ್ ಠಾಣೆಗೆ ಬಂದು ವಿಚಾರಣೆ ಎದುರಿಸಿದ್ದಾರೆ.