ನವದೆಹಲಿ: ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿ ಕನ್ನಡಾಭಿಮಾನ ಮೆರೆದಿದ್ದಾರೆ
ಸಂಸತ್ ಭವನದಲ್ಲಿ ನಡೆಯುತ್ತಿರುವ 18ನೇ ಲೋಕಸಭೆಯ ಮೊದಲ ಅಧಿವೇಶನದ ಆರಂಭದಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಿಂದ ಆಯ್ಕೆಯಾದ ನೂತನ ಸಂಸದರಿಗೆ ಹಂಗಾಮಿ ಸ್ಪೀಕರ್ ಭತೃಹರಿ ಮಹತಾಬ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಈ ವೇಳೆ ಹೆಚ್ಡಿಕೆ, ಜೋಶಿ, ಸೋಮಣ್ಣ, ಶೋಭಾ ಕರಂದ್ಲಾಜೆ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಮೊದಲ ಬಾರಿಗೆ ಸಂಸತ್ ಪ್ರವೇಶಿಸುತ್ತಿರುವ ಸೋಮಣ್ಣ ಅವರು, ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಮೆಟ್ಟಿಲುಗಳಿಗೆ ನಮಸ್ಕರಿಸಿ ಸಂಸತ್ ಪ್ರವೇಶಿಸಿದ್ದು ವಿಶೇಷ.