ನವದೆಹಲಿ: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೆಗೌಡ ಅವರು ಭಾನುವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜ್ಯಸಭೆಯ ಸಭಾಧ್ಯಕ್ಷರೂ, ಹಾಗೂ ಉಪರಾಷ್ಟ್ರತಿಯಾಗಿರುವ ವೆಂಕಯ್ಯ ನಾಯ್ಡು ಅವರು ದೇವೆಗೌಡ ಸೇರಿದಂತೆ ರಾಜ್ಯಸಭೆಗೆ ಆಯ್ಕೆಯಾಗಿರುವವರಿಗೆ ಪ್ರಮಾಣ ವಚನ ಬೋಧಿಸಿದರು.
ದೇವೆಗೌಡರು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದರು.
ಜೂನ್ ನಲ್ಲಿ ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ದೇವೇಗೌಡರು ಆಯ್ಕೆಯಾಗಿದ್ದರು.
1996ರ ನಂತರ ಇದೇ ಮೊದಲ ಬಾರಿಗೆ ಜೆಡಿಎಸ್ ನಾಯಕರೊಬ್ಬರು ಮೇಲ್ಮನೆಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.