ಹತ್ರಾಸ್ ಸತ್ಸಂಗದಲ್ಲಿ ಘೋರ ದುರಂತ:ಕಾಲ್ತುಳಿತದಿಂದ‌ 107 ಮಂದಿ ಸಾವು

ಲಕ್ನೋ: ಉತ್ತರ ಪ್ರದೇಶದ ಹತ್ರಾಸ್ ನ ಸತ್ಸಂಗದಲ್ಲಿ ಕಾಲ್ತುಳಿತದಿಂದಾಗಿ‌ 107ಕ್ಕೂ ಹೆಚ್ಚು ಮಂದಿ ಮೃತಪಟ್ಟ ಘನಘೋರ ದುರಂತ‌ ಸಂಭವಿಸಿದೆ.

ಉತ್ತರ ಪ್ರದೇಶದ ‘ಸತ್ಸಂಗ’ದಲ್ಲಿ ನೂಕುನುಗ್ಗಲು ಸಂಭವಿಸಿ 107ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ರಾಜೇಶ್ ಕುಮಾರ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಹತ್ರಾಸ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಈ ದುರ್ಘನೆ ಸಂಭವಿಸಿದ್ದು, ಜನದಟ್ಟಣೆಯಿಂದಾಗಿ ಕಾಲ್ತುಳಿತ ಉಂಟಾಗಿ 107ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು ಇದು ಇನ್ನೂ ಏರಿಕೆಯಾಗಲಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಹತ್ರಾಸ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಶಿಶ್ ಕುಮಾರ್ ಸಾವುನೋವುಗಳನ್ನು ದೃಢಪಡಿಸಿದ್ದು ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿಂದು ನಡೆದ ಧಾರ್ಮಿಕ ಸಭೆಯೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಹಲವಾರು ಮಹಿಳೆಯರು ಮತ್ತು ಮಕ್ಕಳು ಕೂಡಾ ಸಾವನ್ನಪ್ಪಿದ್ದು 100 ಕ್ಕೂ‌ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹತ್ರಾಸ್ ನಲ್ಲಿ ಭಗವಾನ್ ಶಿವನನ್ನು ಪೂಜಿಸುವ ಧಾರ್ಮಿಕ ಕಾರ್ಯಕ್ರಮ ನಡೆಯಿತಿತ್ತು,ಕಾರ್ಯಕ್ರಮದ ನಂತರ ಜನ ಒಮ್ಮೆಗೆ‌ ನುಗ್ಗಿದಾಗ ಕಾಲ್ತುಳಿತ‌,ನೂಕು,ನುಗ್ಗಲು ಉಂಟಾಗಿ ಘೋರ ದುರಂತ‌ ಸಂಭವಿಸಿದೆ.

ಉತ್ತರ ಪ್ರದೇಶ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಈ‌ ಘೋರ ಘಟನೆಗೆ‌ ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ,ಜತೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಹತ್ರಾಸ್ ನಲ್ಲಿ ಇನ್ನೂ ರಕ್ಷಣಾ ಕಾರ್ಯ ಮುಂದುವರಿ ದಿದೆ, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.