ದರ್ಶನ್‌ ಅಂಡ್ ಗ್ಯಾಂಗ್  ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜು. 18ರ ವರೆಗೆ ವಿಸ್ತರಿಸಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯವಾದ ಕಾರಣ 24ನೇ ಎಸಿಎಂಎಂ ಕೋರ್ಟ್‌ ಜಡ್ಜ್​ ಮುಂದೆ ವಿಡಿಯೋ ಕಾನ್ಫರೆನ್ಸ್​ ಮೂಲಕ  ಆರೋಪಿಗಳನ್ನು ಹಾಜರುಪಡಿಸಲಾಯಿತು.

ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸುವಂತೆ ಎಸ್​ಪಿಪಿ ರಿಮ್ಯಾಂಡ್ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಕೋರ್ಟ್ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನವನ್ನು ಜುಲೈ 18ರವರೆಗೆ ವಿಸ್ತರಿಸಿ ಆದೇಶ ನೀಡಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಮತ್ತು ತುಮಕೂರು ಜೈಲಿನಲ್ಲಿರುವ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್​ ಮೂಲಕ ಕೋರ್ಟ್ ಗೆ ಹಾಜರು ಪಡಿಸಲಾಯಿತು.