ಮೈಸೂರಲ್ಲಿ ಡೆಂಗ್ಯೂ ಜ್ವರಕ್ಕೆ  ಆರೋಗ್ಯಾಧಿ ಕಾರಿಯೇ ಬಲಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗುತ್ತಿದ್ದು, ಆರೋಗ್ಯಾಧಿ ಕಾರಿಯನ್ನೇ ಬಲಿ ತೆಗೆದುಕೊಂಡಿದೆ.

ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗೇಂದ್ರ (32) ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಡೆಂಗ್ಯೂಗೆ ಬಲಿಯಾದ ಮೊದಲ ಪ್ರಕರಣ ಇದಾಗಿದೆ. ನಾಗೇಂದ್ರ ಅವರು ಹುಣಸೂರು ತಾಲ್ಲೂಕಿನ ಗುರುಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜಿಲ್ಲಾ ಆರೋಗ್ಯ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡಿದೆ.

ಮೈಸೂರು ಜಿಲ್ಲೆಯಲ್ಲಿ ಸದ್ಯಕ್ಕೆ 479 ಡೆಂಗ್ಯೂ ಸಕ್ರಿಯ ಪ್ರಕರಣಗಳು ಇವೆ, ಪ್ರತಿ ಶುಕ್ರವಾರ ಡೆಂಗ್ಯೂ ಡ್ರೈ ಡೇ ಆಚರಿಸಲಾಗುತ್ತಿದೆ. ಜೊತೆಗೆ ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲೂ ಜನ ಸಾಮಾನ್ಯರಿಗೆ  ಆರೋಗ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತರು ಅರಿವು ಮೂಡಿಸುತ್ತಿದ್ದಾರೆ