ರಸ್ತೆಗಳಿದು ಸುರಕ್ಷತೆ ಪರೀಕ್ಷಿಸಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು:ನಿಮ್ಮ ಉದಾಸೀನದಿಂದ ಜನರ ಅಮೂಲ್ಯ ಪ್ರಾಣ ಹೋದರೆ ಸಹಿಸುವುದಿಲ್ಲ ಮೊದಲು ನೀವು ರಸ್ತೆಗಳಿದು ಸುರಕ್ಷತೆ ಪರೀಕ್ಷಿಸಿ ಎಂದು ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ನೀಡಿದರು.

ಸಾರಿಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯ ಮಂತ್ರಿಗಳು ಅಪಘಾತಗಳ ನಿಯಂತ್ರಣಕ್ಕೆ ಸಮನ್ವಯ ಅಗತ್ಯ ಸೂಚಿಸಿದರು.

ಅಪಘಾತ ವಲಯ ಮತ್ತು ಬ್ಲಾಕ್ ಸ್ಪಾಟ್ ಗುರುತಿಸಿ ಕೈಕಟ್ಟಿ ಕುಳಿತರೆ ನಿಮ್ಮ ಜವಾಬ್ದಾರಿ ಮುಗಿಯಿತೆ ಎಂದು‌ ಸಿ.ಎಂ ಪ್ರಶ್ನಿಸಿದರು.

ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 34,916 ಅಪಘಾತಗಳು ಸಂಭವಿಸಿದ್ದು, 9943 ಜನರು ಸಾವನ್ನಪ್ಪಿದ್ದಾರೆ, ಜಿಲ್ಲೆಯಲ್ಲಿರುವ ರಸ್ತೆ ಸುರಕ್ಷತಾ ಸಮಿತಿಗಳು ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ತಡೆಯಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು.

ಕಂದಾಯ, ಪೊಲೀಸ್‌, ಸಾರಿಗೆ, ನಗರ ಪಾಲಿಕೆ ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಿದರೆ ಅಪಘಾತಗಳನ್ನು ನಿಯಂತ್ರಿಸಲು ಸಾಧ್ಯ ಎಂದು ತಾಕೀತು ಮಾಡಿದರು.

ರಸ್ತೆ ಸುರಕ್ಷತಾ ಸಪ್ತಾಹಗಳು ಕಾಟಾಚಾರಕ್ಕೆ ನಡೆಯಬಾರದು, ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡರೆ ಹಲವು ಅಪಘಾತಗಳನ್ನು ತಡೆಯಬಹುದಾಗಿದೆ. ನಮ್ಮ ನಿರ್ಲಕ್ಷ್ಯದಿಂದ ಜನರ ಪ್ರಾಣ ಹಾನಿ ಉಂಟಾಗುವುದನ್ನು ಸಹಿಸಲು ಸಾಧ್ಯವಿಲ್ಲ.  ಹಾಟ್‌ಸ್ಟಾಟ್‌ಗಳನ್ನು ಗುರುತಿಸಿ, ಹೆದ್ದಾರಿಗಳಲ್ಲಿ ಅಂಬ್ಯುಲೆನ್ಸ್‌ ವ್ಯವಸ್ಥೆ ಮಾಡಿ, ಟ್ರಾಮಾ ಸೆಂಟರ್‌ ನೆಟ್‌ವರ್ಕ್‌ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.