ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮ ಪ್ರಕರಣ ಸಂಬಂಧ ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರು, ಮೈಸೂರಿನ ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರು ದಾಖಲಾಗಿದೆ.
ನಕಲಿ ದಾಖಲೆ ಸೃಷ್ಟಿಸಿ ಮುಡಾಗೆ ವಂಚಿಸಿ ಕೋಟ್ಯಂತರ ರೂಪಾಯಿ ಬೆಲೆಯ ನಿವೇಶನವನ್ನು ಪಡೆದಿದ್ದಾರೆ ಎಂದು ಆರೋಪಿಸಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾವಮೈದುನ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ದೇವರಾಜು ವಿರುದ್ಧ ದೂರು ದಾಖಲಿಸಿದ್ದಾರೆ.