ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು!

ನವದೆಹಲಿ: ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಜೀವನಾಂಶ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 125 ರ ಅಡಿಯಲ್ಲಿ ವಿಚ್ಛೇದಿತ ಪತ್ನಿಗೆ ಜೀವನಾಂಶ ಕೊಡುಬೇಕಿರುವ ನಿರ್ದೇಶನವನ್ನು ಪ್ರಶ್ನಿಸಿ ಮುಸ್ಲಿಂ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಅಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠವು ಆ ಅರ್ಜಿಯನ್ನು ವಜಾಗೊಳಿಸಿದೆ.

ಜೀವನಾಂಶವನ್ನು ಕೋರುವ ಕಾನೂನು ಎಲ್ಲಾ ವಿವಾಹಿತ ಮಹಿಳೆಯರಿಗೆ ಅವರ ಧರ್ಮವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಪೀಠ ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿ ನಾಗರತ್ನ ಮತ್ತು ನ್ಯಾಯಮೂರ್ತಿ ಮಾಸಿಹ್ ಅವರು ಪ್ರತ್ಯೇಕ, ಆದರೆ ಏಕಕಾಲೀನ ತೀರ್ಪುಗಳನ್ನು ನೀಡಿದ್ದಾರೆ.