ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರ ಅವರನ್ನು ಹೆಚ್ಚಿನ ವಿಚಾರಣೆಗೆ 6 ದಿನಗಳ ಕಾಲ ಇಡಿ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ನೀಡಿದೆ
ಹೆಚ್ಚಿನ ವಿಚಾರಣೆ, ಮಹಜರು ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ನಾಗೇಂದ್ರ ಅವರನ್ನು ಯಲಹಂಕದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.
ಜು.18 ರ ವರೆಗೆ ಇ.ಡಿ ಕಸ್ಟಡಿಗೆ ನೀಡಿ ನ್ಯಾಯಾದೀಶರು ಆದೇಶಿಸಿದ್ದಾರೆ. ಬಳಿಕ ನ್ಯಾಯಾಧೀಶರ ಮನೆಯಿಂದ ಇ.ಡಿ ಕಚೇರಿಗೆ ಆರೋಪಿಯನ್ನು ಕರೆದೊಯ್ಯಲಾಯಿತು.
ನಿಗಮದಲ್ಲಿ ನೂರಾರು ಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ ಕಾಂಗ್ರೆಸ್ ಶಾಸಕ ನಾಗೇಂದ್ರರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶುಕ್ರವಾರ ಬಂಧಿಸಿ, ರಾತ್ರಿ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಇ.ಡಿ ಅಧಿಕಾರಿಗಳು 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರ ಮುಂದೆ ಮನವಿ ಮಾಡಿದರು.
ಆದರೆ 6 ದಿನ ಕಸ್ಟಡಿಗೆ ನ್ಯಾಯಾಧೀಶರು ನೀಡಿ, ಜು.18 ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ನ್ಯಾಯಾಧೀಶರ ಮುಂದೆ ನಾಗೇಂದ್ರ ಅವರು ತಮಗೆ ಬಿಪಿ, ಜೊತೆಗೆ ಸುಸ್ತು ಇದೆ ಎಂದು ತಿಳಿಸಿದರು.
ಹಾಗಾಗಿ ಪ್ರತಿದಿನ ಮೂರು ಗಂಟೆ ವಿಚಾಣೆಗೆ ಅವಕಾಶ ನೀಡಲಾಗಿದ್ದು ವಿಚಾರಣೆ ಬಳಿಕ 30 ನಿಮಷಗಳ ಕಾಲ ವಿಶ್ರಾಂತಿ ನೀಡಬೇಕು, ಪ್ರತಿದಿನ ವೈದ್ಯಕೀಯ ತಪಾಸಣೆ ಮಾಡುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ.