ನಿವೃತ್ತ ಪ್ರಾಂಶುಪಾಲ ಕೊಲೆ

ಮೈಸೂರು: ನಿವೃತ್ತ ಪ್ರಾಂಶುಪಾಲರೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.
ಪರಶಿವಮೂರ್ತಿ (67) ಕೊಲೆಗೀಡಾದ ನಿವೃತ್ತ ಪ್ರಾಂಶುಪಾಲರು.
ನಿವೇದಿತ ನಗರದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ.
ಹಂತಕರು ಮನೆಗೆ ನುಗ್ಗಿ ಮನಸೋ ಇಚ್ವೆ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಪರಶಿವಮೂರ್ತಿ ಹಾಸನ ಸರ್ಕಾರಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ನಿವೃತ್ತಿಯಾಗಿದ್ದರು. ದಾಂಪತ್ಯದಲ್ಲಿ ಭಿನ್ನಾಭಿಪ್ರಾಯವಾಗಿ ಒಂಟಿಯಾಗಿ ವಾಸಿಸುತ್ತಿದ್ದರು. ಲೇವಾದೇವಿ, ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಹಿರಿಯ ಪೆÇಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಕುವೆಂಪುನಗರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಕೊಂಡು ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.