ಟ್ರಂಪ್ ಮೇಲಿನ ದಾಳಿಗೆ ಮೋದಿ ಖಂಡನೆ

ನವದೆಹಲಿ: ಅಮೆರಿಕದಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ನಡೆದ ಗುಂಡಿನ ದಾಳಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಈ ದಾಳಿ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

ನನ್ನ ಸ್ನೇಹಿತ ಮತ್ತು ಮಾಜಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ದಾಳಿಯಿಂದ ನಾನು ತೀವ್ರ ಕಳವಳಗೊಂಡಿದ್ದೇನೆ, ನಾನು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಬರೆದಿದ್ದಾರೆ.

ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಸ್ಥಾನವಿಲ್ಲ,ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಎಕ್ಸ್ ನಲ್ಲಿ ಮೋದಿ ಬರೆದಿದ್ದಾರೆ.