ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಪತ್ನಿಯನ್ನು ಇಡಿ ವಶಕ್ಕೆ ಪಡೆದಿದೆ.
ಬೆಂಗಳೂರಿನ ಡಾಲರ್ಸ್ ಕಾಲನಿ ನಿವಾಸದಲ್ಲಿದ್ದ ನಾಗೇಂದ್ರ ಪತ್ನಿ ಮಂಜುಳಾ ಅವರನ್ನು ವಶಕ್ಕೆ ಪಡೆದಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಂತಿನಗರದ ಕಚೇರಿಗೆ ಕರೆ ತಂದು ವಿಚಾರಣೆ ನಡೆಸುತ್ತಿದ್ದಾರೆ.
ವಾಲ್ಮೀಕಿ ನಿಗಮದ 187 ಕೋಟಿ ಅಕ್ರಮ ವ್ಯವಹಾರಲ್ಲಿ ಹಲವಾರು ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ. ಬಂಧನಕ್ಕೆ ಒಳಗಾದ ನಾಗೇಂದ್ರ ಅವರ ಬ್ಯಾಂಕ್ ಖಾತೆ ಜೊತೆ ಕುಟುಂಬಸ್ಥರ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ ಪತ್ನಿಯ ಖಾತೆಯಿಂದ ಹೆಚ್ಚು ಹಣ ವರ್ಗಾವಣೆಯಾಗಿರುವ ವಿಚಾರ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಮಂಜುಳಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.