ಉದ್ಯೋಗ ಕಲ್ಪಿಸುವ ವಿಧೇಯಕ ತಡೆಹಿಡಿದ  ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ವಿಧೇಯಕ ಮಂಡಿಸಿ,ತಕ್ಷಣ ತಾತ್ಕಾಲಿಕ ತಡೆ ನೀಡಿದ ಸರ್ಕಾರದ ನಿರ್ಧಾರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಂಡಿಸಿದ್ದಾರೆ.

ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ, ತಡೆಹಿಡಿದಿದ್ದೇಕೆ ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವಾಡುವಿರಾ, ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತಾ ಎಂದು ಎಕ್ಸ್ ನಲ್ಲಿ ವಿಜಯೇಂದ್ರ ಕಾರವಾಗಿ ಪೋಸ್ಟ್ ಮಾಡಿದ್ದಾರೆ.

ವಿಧೇಯಕ ದಿಢೀರ್ ತಡೆಹಿಡಿದು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಅಪಮಾನಿಸಲಾಗಿದೆ. ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುವೆ ಎಂದು ಬರೆದಿದ್ದಾರೆ.