ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತು ಗ್ಯಾಂಗ್ಗೆ ಕೋರ್ಟ್ ಮತ್ತೆ ಶಾಕ್ ನೀಡಿದೆ.
ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದ್ದು, ನಟ ದರ್ಶನ್ಗೆ ಮತ್ತೆ 14 ದಿನ ಜೈಲೇ ಗತಿ ಆಗಿದೆ.
ನಟ ದರ್ಶನ್,ಪವಿತ್ರಾಗೌಡ ಹಾಗೂ ಇತರ ಆರೋಪಿಗಳ ನ್ಯಾಯಾಂಗ ಬಂಧನ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯ, ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿತು.
ಎರಡೂ ಕಡೆಯ ವಕೀಲರ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಆಗಸ್ಟ್ 1ರ ವರೆಗೂ ದರ್ಶನ್ ಆ್ಯಂಡ್ ಗ್ಯಾಂಗ್ಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಹಾಗಾಗಿ 14 ದಿನಗಳ ಕಾಲ ನಟ ದರ್ಶನ್ ಮತ್ತು ಗ್ಯಾಂಗ್ ಗೆ ಜೈಲೇ ಗತಿ ಆಗಿದೆ.
ನಟ ದರ್ಶನ್ಗೆ ಜಾಮೀನು ನೀಡದಿರಲು 13 ಕಾರಣಗಳಿರುವ ವರದಿಯನ್ನು ವಕೀಲರು ಕೋರ್ಟ್ಗೆ ಸಲ್ಲಿಸಿದ್ದಾರೆ.