ಮಾಜಿ ಸಚಿವ ನಾಗೇಂದ್ರಗೆ ಮತ್ತೆ ಜೈಲೇ ಗತಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರಗೆ ಮತ್ತೆ ಜೈಲೇ ಗತಿಯಾಗಿದೆ.

ಆ.3 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ನಾಗೇಂದ್ರ ಅವರನ್ನು ಇಂದು ಕೋರ್ಟ್‌ಗೆ ಇಡಿ ಅಧಿಕಾರಿಗಳು ಹಾಜರುಪಡಿಸಿದರು, ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.

ಪ್ರಕರಣದಲ್ಲಿ ಈಗಾಗಲೇ 5 ದಿನಗಳಂತೆ ಎರಡು ಬಾರಿ ಇಡಿ ಕಸ್ಟಡಿಗೆ ಪಡೆದಿತ್ತು. ಆದರೆ ಅಕ್ರಮದ ಬಗ್ಗೆ ಇಡಿ ಅಧಿಕಾರಿಗಳ ಪ್ರಶ್ನೆಗೆ ನಾಗೇಂದ್ರ ಸರಿಯಾಗಿ ಉತ್ತರಿಸಿಲ್ಲ ಹಾಗಾಗಿ ಮತ್ತೆ ಕಸ್ಟಡಿಗೆ ಇಡಿ ಕೇಳಿತ್ತು.

ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರ ಬಂಧನವಾಗಿದೆ.