ಸುವರ್ಣಸೌಧದ ಎದುರು ವಾಟಾಳ್ ಪ್ರತಿಭಟನೆ

ಬೆಳಗಾವಿ: ಉತ್ತರ ಕರ್ನಾಟಕ ಜಿಲ್ಲೆಗಳ ಅಭಿವೃದ್ಧಿಗೆ ಒತ್ತಾಯಿಸಿ ಕನ್ನಡ ಹೋರಾಟಗಾರ ವಾಟಾಳ ನಾಗರಾಜ್ ಸೋಮವಾರ ಪ್ರತಿಭಟನೆ ನಡೆಸಿದರು.
ಬೆಳಗಾವಿ ಸುವರ್ಣ ವಿಧಾನಸೌಧದ ಬಳಿ ವಾಟಾಳ ನಾಗರಾಜ್ ಪ್ರತಿಭಟಿಸಿದರು.
ಉತ್ತರ ಕರ್ನಾಟಕ ಜಿಲ್ಲೆಗಳ ಅಭಿವೃದ್ಧಿಗೆ ಸರಕಾರಗಳಿಂದ ಆಗುತ್ತಿರುವ ಅನ್ಯಾಯ ತಡೆಯಬೇಕು ಎಂದು ವಾಟಾಳ ನಾಗರಾಜ್ ಪ್ರತಿಭಟನೆ ವೇಳೆ ಹೇಳಿದರು.
ಉತ್ತರ ಕರ್ನಾಟಕ ಕೇಂದ್ರವಾಗಿಟ್ಟುಕೊಂಡು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ರಾಜ್ಯ ಸರಕಾರದ ಉನ್ನತಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಬೇಕು ಎಂದರು.
ಈ ಬಗ್ಗೆ ಹಲವು ಪ್ರತಿಭಟನೆ ನಡೆದಿದೆ. ಆದರೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳು ನಿರ್ಲಕ್ಷಿಸಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.