ಇದು ರಾಜಕೀಯ ಬಜೆಟ್‌ ಅಲ್ಲ; ವಿಕಸಿತ ಭಾರತದ ಬಜೆಟ್ -ಡಾ.ಕೆ.ಸುಧಾಕರ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಜಕೀಯ ಬಜೆಟ್‌ ಮಂಡಿಸದೆ, ರಾಷ್ಟ್ರೀಯ ಬಜೆಟ್‌ ಮಂಡಿಸಿದೆ,‌ಇದು ವೋಟ್‌ ಬ್ಯಾಂಕ್‌ ಅಲ್ಲ

ವಿಕಸಿತ ಭಾರತದ ಬಜೆಟ್‌ ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ಆರ್ಥಿಕ ಅಭಿವೃದ್ಧಿ ಮತ್ತು ಜನಕಲ್ಯಾಣದ ಸಮತೋಲನ ಸಾಧಿಸಿರುವ ಕೇಂದ್ರ ಬಜೆಟ್, ತನ್ನ ಆಡಳಿತದ ರಾಜ್ಯಗಳನ್ನ ಆರ್ಥಿಕವಾಗಿ ದಿವಾಳಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಗಳಿಗೆ ಒಂದು ಒಳ್ಳೆಯ ಪಾಠವಾಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದ 2024 ನೇ ಸಾಲಿನ ಬಜೆಟ್‌ ಕುರಿತು ಪ್ರತಿಕ್ರಿಯಿಸಿದ ಅವರು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಅಭಿವೃದ್ಧಿ ಗುರಿಯ ಹಾಗೂ ತೆರಿಗೆ ಹೊರೆ ಇಲ್ಲದ, ಸಮತೋಲಿತ ಬಜೆಟ್‌ ನೀಡಿದ್ದಾರೆ ಎಂದು ಸಂತಸ ಪಟ್ಟರು.

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ಕಡಿಮೆ ಸ್ಥಾನಗಳು ಬಂದಿದ್ದರಿಂದ ಬಜೆಟ್‌ನಲ್ಲೂ ತಾರತಮ್ಯ ಮಾಡಬಹುದು ಎಂಬ ವಿರೋಧ ಪಕ್ಷಗಳ ಸುಳ್ಳಿನ ಊಹೆಗಳಿಗೆ ಈ ಬಜೆಟ್‌ ತಣ್ಣೀರು ಎರಚಿದೆ.

ಎಂದು ತಿರುಗೇಟು ನೀಡಿದರು.

ನಮ್ಮ ಸರ್ಕಾರದ ಬಜೆಟ್‌ ಯುವಜನರು, ಮಹಿಳೆಯರು, ರೈತರು ಸೇರಿದಂತೆ ಎಲ್ಲ ವರ್ಗದ ಆಶೋತ್ತರಗಳಿಗೆ ಸ್ಪಂದಿಸಿದೆ. ಇದು ಚುನಾವಣಾ ದೃಷ್ಟಿಯ ಬಜೆಟ್‌ ಆಗಿರದೆ ದೂರದೃಷ್ಟಿಯ ದೇಶದ ಭವಿಷ್ಯವನ್ನು ಊಹಿಸಿ ಮಾಡಿದ ಬಜೆಟ್‌ ಎಂದು ಸುಧಾಕರ್ ಬಣ್ಣಿಸಿದರು ‌

ಕೃಷಿ ಕ್ಷೇತ್ರದ ಸಮಗ್ರ ಪ್ರಗತಿಯ ದೃಷ್ಟಿಯಿಂದ ಹಲವು ಯೋಜನೆಗಳನ್ನು ತರಲಾಗಿದೆ. ತರಕಾರಿ ಪೂರೈಕೆಗಾಗಿ ಸಪ್ಲೈ ಚೈನ್‌ ಬಲಗೊಳಿಸುವ ಕ್ರಮದಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ರೈತರಿಗೆ ಹೆಚ್ಚು ಲಾಭ ಸಿಗಲಿದೆ. ಈ ಭಾಗದಲ್ಲಿ ತರಕಾರಿ ಬೆಳೆಗಾರರ ಸಂಖ್ಯೆ ಹೆಚ್ಚಿರುವುದರಿಂದ ಈ ಕ್ರಮ ಶ್ಲಾಘನೀಯ ಎಂದು ಹೇಳಿದರು.

ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ಯೋಜನೆಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಭಾಗಗಳ ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ,ಅದಕ್ಕಾಗಿ ಸಂಬಂಧಪಟ್ಟ ಸಚುವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಡಾ.ಸುಧಾಕರ್ ತಿಳಿಸಿದರು.