ಬೆಂಗಳೂರು: ಭಾರೀ ಮಳೆ ಸುರಿಯುತ್ತಿದ್ದಾಗಲೇ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಹೊತ್ತಿ ಉರಿದು ಹೋಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿದ್ದಾರೆ.
ಸೋಮವಾರ ರಾತ್ರಿ ಸುಮಾರು 11.30 ರಲ್ಲಿ ಈ ಘಟನೆ ನಡೆದಿದ್ದು, ಬಸ್ ಸಂಪೂರ್ಣ ಸುಟ್ಟು ಹೋಗಿದೆ.
ಈ ಬಸ್ ನಾಗಾವರ ಕಡೆಯಿಂದ ಹೆಬ್ಬಾಳ ಕಡೆಗೆ ಬರುತ್ತಿತ್ತು. ಹೆಬ್ಬಾಳದ ಬಿಡಬ್ಲ್ಯೂಎಸ್ ಎಸ್ ಬಿ ಬಳಿ ಸರ್ವಿಸ್ ರಸ್ತೆಯಲ್ಲಿ ದಿಢೀರನೆ ಬಸ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ.
ತಕ್ಷಣ ಎಚ್ಚತ್ತ ಕಂಡಕ್ಟರ್ ಬಸ್‌ನಿಂದ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಪ್ರಯಾಣಿಕರು ಕೆಳಗಿಳಿಯುತ್ತಿದ್ದಂತೆ ಬಸ್ ಹೊತ್ತಿ ಉರಿದಿದೆ.
ಜೋರು ಮಳೆ ಬರುತ್ತಿದ್ದರಿಂದ ಬಸ್‌ನ ಎಂಜಿನ್‌ಗೆ ನೀರು ಹೋಗಿ ಶಾರ್ಟ್ ಸರ್ಕ್ಯೂಟ್ ಆಗಿರಬಹುದೆಂದು ಶಂಕಿಸಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು, ಬಿಎಂಟಿಸಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸುಟ್ಟುಹೋದ ಬಸ್ ತೆರವುಗೊಳಿಸಿದರು
ಈ ಅವಘಡದಿಂದಾಗಿ ಸುಮಾರು 8 ಕಿಲೋ ಮೀಟರ್ ಉದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿದ್ದವು.