ಬೆಂಗಳೂರು: ಮಾನವ-ಆನೆ ಸಂಘರ್ಷ ತಡೆಗೆ ನಮ್ಮ ಸರ್ಕಾರ ರೈಲ್ವೆ ಬ್ಯಾರಿಕೇಡ್ ಅಳವಡಿಕೆ, ವಿಶೇಷ ಟಾಸ್ಕ್ ಫೋರ್ಸ್ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ವಿಶ್ವ ಆನೆ ದಿನದ ಅಂಗವಾಗಿ ಬೆಂಗಳೂರಿನ ಜಿಕೆವಿಕೆಯಲ್ಲಿ ಮಾನವ-ಆನೆ ಸಂಘರ್ಷ ನಿರ್ವಹಣೆ ವಿಷಯ ಕುರಿತು ನಡೆದ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಸಿಎಂ ಮಾತನಾಡಿದರು.
ಇತ್ತೀಚಿನ ವರ್ಷಗಳಲ್ಲಿ ಮಾನವ-ಆನೆ ಸಂಘರ್ಷಗಳು ಹೆಚ್ಚಾಗುತ್ತಿವೆ. ಈ ಅಂತಾರಾಷ್ಟ್ರೀಯ ಸಮ್ಮೇಳನ ಮಾನವ-ಆನೆ ಸಂಘರ್ಷಗಳನ್ನ ಕಡಿಮೆ ಮಾಡುವಲ್ಲಿ ಕ್ರಮ ಕೈಗೊಳ್ಳಲು ಉತ್ತಮ ವೇದಿಕೆಯಾಗಿದೆ ಎಂದು ತಿಳಿಸಿದರು.
ದೇಶದಲ್ಲಿ ಅತಿ ಹೆಚ್ಚು ಆನೆಗಳನ್ನು ಹೊಂದಿರುವ ರಾಜ್ಯ ಕರ್ನಾಟಕ,ಅತಿ ಹೆಚ್ಚು ಹುಲಿ ಹೊಂದಿರುವ 2ನೇ ರಾಜ್ಯ, ಅಲ್ಲದೇ ಅತಿ ಹೆಚ್ಚು ಅರಣ್ಯ ಭೂಮಿ ಹೊಂದಿರುವ ರಾಜ್ಯವೂ ಆಗಿದೆ ಇದು ಹೆಮ್ಮೆಯ ವಿಷಯ ಎಂದು ಹೇಳಿದರು.
ಕರ್ನಾಟಕದಲ್ಲಿ ಮೈಸೂರು ಮತ್ತು ದಾಂಡೇಲಿ ಮೀಸಲು ಅರಣ್ಯ ಪ್ರದೇಶಗಳಿವೆ. ಕಳೆದ 10 ವರ್ಷಗಳಲ್ಲಿ 2,500 ಮಾನವ-ಆನೆ ಸಂಘರ್ಷ ಪ್ರಕರಣಗಳು ಆಗಿವೆ.
ಸೋಲಾರ್ ಫೆನ್ಸಿಂಗ್ ಸೇರಿ ಅನೇಕ ವ್ಯವಸ್ಥೆ ಮಾಡಲಾಗಿದೆ. ದೇಶದಲ್ಲಿ ಮೊದಲ ಬಾರಿಗೆ ರೈಲ್ವೆ ಫೆನ್ಸಿಂಗ್ ಅಳವಡಿಕೆ ಮಾಡಿಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕದಲ್ಲಿ ವಿಶೇಷ ಟಾಸ್ಕ್ ಫೋರ್ಸ್ ರಚನೆಯಾಗಿದೆ ಮಾನವ-ಆನೆ ಸಂಘರ್ಷ ತಡೆಗಟ್ಟಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂದು ಸಿದ್ದರಾಮಯ್ಯ ವಿವರಿಸಿದರು.
ಮಾನವ-ಆನೆ ಸಂಘರ್ಷ ತಡೆಗೆ
ಇಂದಿನ ಸಮ್ಮೇಳನದ ಮೂಲಕ ಬರುವ ಉತ್ತಮ ಸಲಹೆಗಳನ್ನು ಅಳವಡಿಸಿಕೊಳ್ಳೋಣ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕೇರಳ, ತಮಿಳುನಾಡು, ತೆಲಂಗಾಣ ರಾಜ್ಯದ ಅರಣ್ಯ ಸಚಿವರು ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.