ಸೆ. 25 ಕರ್ನಾಟಕ ಬಂದ್ ಇಲ್ಲ; 28ರ ಬಂದ್ ಬಗ್ಗೆ ಪ್ರಕಟಿಸಲಾಗುವುದು -ಕುರುಬೂರು ಶಾಂತಕುಮಾರ್

ಮೈಸೂರು: ಶುಕ್ರವಾರ ಕರ್ನಾಟಕ ಬಂದ್ ಇರುವುದಿಲ್ಲ; ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಲಾಗುವುದೆಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ನಡೆ ವಿರೋಧಿಸಿ ರೈತಪರ ಸಂಘಟನೆಯಿಂದ ಸೆ. 25ರಂದು ವಿವಿಧ ರೈತ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಲು ಮುಂದಾಗಿದ್ದವು. ಆದರೆ, ಇದೀಗ ಕೇವಲ ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಸೆ. 28ರಂದು ಕರ್ನಾಟಕ ಬಂದ್ ಬಗ್ಗೆ ಬುಧವಾರ ಸಂಜೆ 4 ಗಂಟೆಗೆ ಕೋರ್ ಕಮಿಟಿಯಲ್ಲಿ ಚರ್ಚಿಸಿ ನಂತರ ಪ್ರಕಟಿಸುವುದಾಗಿ ಕರುಬೂರು ಶಾಂತಕುಮಾರ್ ಹೇಳಿದರು.