ರಾಜ್ಯಪಾಲರ ವಿರುದ್ಧ ಮೈಸೂರಿನಲ್ಲಿ ಭಾರೀ ಪ್ರತಿಭಟನೆ

ಮೈಸೂರು: ಮೈಸೂರಿನ ನ್ಯಾಯಾಲಯದ ಬಳಿ ಅಲ್ಪಸಂಖ್ಯಾತರ ಜಾಗೃತಿ ವೇದಿಕೆ ಅಧ್ಯಕ್ಷ ಶಿವರಾಂ ನೇತೃತ್ವದಲ್ಲಿ ಸಿಎಂ‌ ಸಿದ್ದರಾಮಯ್ಯ ಪರವಾಗಿ ಕಾಂಗ್ರೆಸ್ ನವರು ಪ್ರತಿಭಟನೆ ನಡೆಸಿದರು.

ಮುಡಾ ಹಗರಣ ಕುರಿತು ಮುಖ್ಯ ಮಂತ್ರಿ ಸಿದ್ದರಾಮಯ್ಯ‌ ವಿರುದ್ಧ ಪ್ರಾಸಿಕ್ಯೂಷನ್ ಗೆ‌ ರಾಜ್ಯಪಾಲರು ಅನುಮತಿ ನೀಡಿರುವುದನ್ನು ವಿರೋಧಿಸಿ ಭಾರೀ ಪ್ರತಭಟನೆ ಹಮ್ಮಿಕೊಳ್ಳಲಾಗಿತ್ತು.

ನ್ಯಾಯಾಲಯದ ಮುಂದೆ ಟೈರ್ ಗಳಿಗೆ‌ ಬೆಂಕಿ ಹಚ್ಚಿ, ಮಾನವ ಸರಪಳಿ ನಿರ್ಮಿಸಿ ರಾಜ್ಯಪಾಲರ ವಿರುಧ್ಧ ‌ಘೋಷಣೆಗಳನ್ನು ಕೂಗಲಾಯಿತು.

ರಾಜ್ಯಪಾಲರು ಜೆಡಿಎಸ್,ಬಿಜೆಪಿ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಅವರನ್ನು ಕೂಡಲೇ ಬೇರೆ‌ ರಾಜ್ಯಕ್ಕೆ ವರ್ಗಾಯಿಸಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಅಲ್ಪಸಂಖ್ಯಾತರ ಜಾಗೃತಿ ವೇದಿಕೆ ಸದಸ್ಯರು‌ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ‌ಪಾಲ್ಗೊಂಡಿದ್ದರು.

ನ್ಯಾಯಾಲಯ,ಮುಡಾ‌ ಕಚೇರಿ,ಸಿಎಂ ಸಿದ್ದರಾಮಯ್ಯ ನಿವಾಸ,ಕೆ.ಆರ್.ವೃತ್ತ, ಚಾಮುಂಡಿ‌ ಬೆಟ್ಟ ಸೇರೆದಂತೆ ಜನ ನಿಬಿಡ‌ ಸ್ಥಳಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.