ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಸರ್ಕಾರದಲ್ಲಿ ಹಲವು ಬೆಳವಣಿಗೆಗಳು ಆಗುತ್ತಿದೆ.
ಇಡೀ ಸಚಿವ ಸಂಪುಟ ಸಿಎಂ ಬೆನ್ನಿಗೆ ನಿಂತಿದೆ. ಸಿಎಂ ಸಿದ್ದರಾಮಯ್ಯ ಆ.22ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಶಾಸಕರ ವಿಶ್ವಾಸ ಪಡೆಯಲು ಮುಂದಾಗಿದ್ದಾರೆ.
ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸಿಎಂ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬೆನ್ನಲ್ಲೇ ಶಾಸಕಾಂಗ ಸಭೆ ಕರೆದಿರುವುದು ಮಹತ್ವ ಪಡೆದುಕೊಂಡಿದೆ.
ಸಿಎಲ್ ಪಿ ರಾಜ್ಯಪಾಲರ ವಿರುದ್ಧ ಶಾಸಕಾಂಗ ಸಭೆ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಜತೆಗೆ ಇಡೀ ಪ್ರಕರಣದ ಬೆಳವಣಿಗೆ ಬಗ್ಗೆ ಶಾಸಕರಿಗೆ ಮನವರಿಕೆ ಮಾಡಿಕೊಟ್ಟು ಯಾವ ನಿರ್ಧಾರ ತೆಗೆದುಕೊಂಡರೆ ಸೂಕ್ತ ಎಂಬುದರ ಬಗ್ಗೆ ಚರ್ಚಿಸಲಿದ್ದಾರೆ.